Vijayapatha – ವಿಜಯಪಥ
Saturday, November 2, 2024
NEWSಸಂಸ್ಕೃತಿ

ಬೀಡನಹಳ್ಳಿ ಶ್ರೀ ನಂದಿ ಬಸವೇಶ್ವರ ಸ್ವಾಮಿ ಕೊಂಡ ಮುಚ್ಚುವ ಸಮಾರಂಭ ಅದ್ದೂರಿ

ಭಕ್ತರಿಗೆ ಅನ್ನ ಸಂತರ್ಪಣೆ l ಕೊಂಡ ಮುಚ್ಚಿದ ಬೆಟ್ಟೇಗೌಡರ ಕುಟುಂಬದವರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬನ್ನೂರು: ಬೀಡನಹಳ್ಳಿ ಶ್ರೀ ನಂದಿ ಬಸವೇಶ್ವರ ಸ್ವಾಮಿ ಕೊಂಡ ಮುಚ್ಚುವ ಸಮಾರಂಭ ಇಂದು ಬೆಳಗ್ಗೆ ಅದ್ದೂರಿಯಾಗಿ ಜರುಗಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗ್ರಾಮದ ಪ್ರತಿ ಮನೆಯಿಂದ ಧಾನ್ಯ ಸಂಗ್ರಹಿಸಿ ಶ್ರೀಸ್ವಾಮಿಯ ಸನ್ನಿಧಿಯಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆ ನೆರವೆರಿಸಲಾಯಿತು.

ಕಳೆದ ಸೋಮವಾರಗ್ರಾಮದಲ್ಲಿ ಕಾಶಿವೇಷಧಾರಿ ಮಹದೇಸ್ವಾಮಿ ಅವರು ಗಜಗಾಂಭೀರ್ಯದಿಂದ 9ನೇ ಕೊಂಡ ಹಾಯ್ದರು. ಇವರ ನಂತರ ಶ್ರೀಸ್ವಾಮಿಯ ದೇವರ ಗುಡ್ಡಪ್ಪನವರಾದ ನಂಜುಂಡೆಗೌಡ ಮತ್ತು ರಾಜೇಶ್‌ಅವರು ಕೊಂಡ ಹಾಯ್ದರು.

ಕೊಂಡ ಹಾಯುವುದಕ್ಕೂ ಮುನ್ನಾ ಮುಂಜಾನೆ ಶ್ರೀಸ್ವಾಮಿಯ ಸನ್ನಿಧಿಯಿಂದ ಬಸವನ ಜತೆಗೆ ಗ್ರಾಮದೇವತೆ ಮಾರಮ್ಮನವರ ಮತ್ತು ಮುತ್ತತ್ತಿರಾಯನ ಪೂಜೆಯನ್ನು ರಾಜ ಬೀದಿಯ ಮೆರವಣಿಗೆ ಮೂಲಕ ಗುರುಸ್ವಾಮಿ ಅವರ ಮನೆಗೆ ಕರೆತರಲಾಯಿತು.

ಗುರುಸ್ವಾಮಿ ಅವರ ಮನೆಯಲ್ಲಿ ಪೂಜೆಗೆ ಹೂ ಹೊಂಬಾಳೆ ಮಾಡಿದ ನಂತರ ಅಲ್ಲಿಂದಲ್ಲೇ ಶ್ರೀಸ್ವಾಮಿಗೆ ಹರಕೆ ಹೊತ್ತುಕೊಂಡಿದ್ದ ಭಕ್ತರ ಬಾಯಿಬೀಗ ಚುಚ್ಚಲಾಯಿತು. ಈ ವೇಳೆ ತಮಟೆ, ಕೊಂಬು ಕಹಳೆಗಳ ಮಂಗಳವಾದ್ಯಗಳೊಂದಿಗೆ ಸಾವಿರಾರು ಭಕ್ತರು ಮೆರವಣಿಗೆ ಮೂಲಕ ಶ್ರೀಸ್ವಾಮಿಯ ಆವರಣದಲ್ಲಿ ತೆಗೆಯಲಾಗಿದ್ದ ಕೊಂಡದ ವರೆಗೂ ವಿಜೃಂಭಣೆಯಿಂದ ಮೆರವಣಿಗೆ ಮಾಡಿಕೊಂಡು ಬರಲಾಯಿತು.

ಬಾಯಿಬೀಗ ಹರಕೆ ಹೊತ್ತಿದ್ದ ಭಕ್ತರು ಪಂಜಿನ ಸೇವೆಯನ್ನು ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಮಾಡಿಕೊಂಡು ಬಂದರು.

ಕೊಂಡದ ಬಳಿ ಬರುತ್ತಿದ್ದಂತೆ ಕೊಂಗ ಬೀಸಿ ಕೆಂಡದ ಮೇಲೆ ಇದ್ದ ಬೂದಿಯನ್ನು ತೆಗೆಯಲಾಯಿತು. ಬಳಿಕ ಕಾಶಿಯ ವೇಷಧಾರಿ ಮಹದೇಸ್ವಾಮಿ, ಅವರ ಹಿಂದೆ ಶ್ರೀಸ್ವಾಮಿಯ ದೇವರ ಗುಡ್ಡಪ್ಪನವರಾದ ನಂಜುಂಡೆಗೌಡ ಮತ್ತು ರಾಜೇಶ್‌ಅವರು ಕೊಂಡ ಹಾಯ್ದರು.

ಕೊಂಡ ಹಾಯುವುದನ್ನು ಪ್ರತಿಯೊಬ್ಬರು ನೋಡಲೆಂದು ಬೆಳ್ಳಿ ಪರದೆಯ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ನೆರೆದಿದ್ದ ಸಾವಿರಾರು ಭಕ್ತರು ಕೊಂಡ ಹಾಯುವುದನ್ನು ನೋಡಿದರು.

ಭಾನುವಾರ ಬಂಡಿಯುತ್ಸವ ನಡೆಯಿತು. ಸೋಮವಾರ ಕೊಂಡೋತ್ಸವ ನೆರವೇರುವ ಮೂಲಕ ಬಂಡಿಕೊಂಡೋತ್ಸವ ಪೂರ್ಣಗೊಂಡಿತ್ತು. ಇಂದು ಕೊಂಡ ಮುಚ್ಚುವ ಕಾರ್ಯಕ್ರಮವನ್ನು ಗ್ರಾಮದ ಮುಖಂಡರಾದ ಬೆಟ್ಟೇಗೌಡನ ಕುಟುಂಬದವರು ನೆರೆವೇರಿಸಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ