NEWSಸಂಸ್ಕೃತಿಸಿನಿಪಥ

ದಲಿತ ಬಂಡಾಯ ಸಾಹಿತ್ಯದ ಕವಿ ಡಾ.ಸಿದ್ದಲಿಂಗಯ್ಯ ಇನ್ನು ನೆನಪು ಮಾತ್ರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೋವಿಡ್​ ಸೋಂಕಿನಿಂದ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ (66) ಶುಕ್ರವಾರ ನಿಧನರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳಿದ್ದಾರೆ. ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದ ಅವರು, ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ಸೃಷ್ಟಿಸಿದ್ದರು. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.

ಡಾ.ಸಿದ್ದಲಿಂಗಯ್ಯ ಅವರ ಹೆಸರನ್ನು ಉಲ್ಲೇಖಿಸದೇ ಬಂಡಾಯ ಸಾಹಿತ್ಯದ ಇತಿಹಾಸ ಬರೆಯಲು ಸಾಧ್ಯವಿಲ್ಲ ಎಂಬಂತೆ ಅವರು ಹೆಸರುವಾಸಿಯಾಗಿದ್ದಾರೆ. ಪಂಪ, ನಾಡೋಜ ಪ್ರಶಸ್ತಿಗಳಿಗೂ ಭಾಜನರಾಗಿದ್ದ ಅವರು, ದಲಿತ, ಬಂಡಾಯವೆಂದರೆ ಹೊಡಿ- ಬಡಿ ಎಂಬುದಲ್ಲ ಎಂದು ವ್ಯಾಖ್ಯಾನಿಸಿದ್ದರು.

ದಲಿತರು ಬಂದರು ದಾರಿಬಿಡಿ, ದಲಿತರ ಕೈಗೆ ರಾಜ್ಯಕೊಡಿ ಎಂಬ ಅವರ ಕ್ರಾಂತಿಗೀತೆ ಈಗಲೂ ದಲಿತ ಚಳವಳಿಗಳಲ್ಲಿ ಕೇಳಿಬರುವಂತಹದ್ದು. ಹೊಲೆ ಮಾದಿಗರ ಹಾಡು, ಸಾವಿರಾರು ನದಿಗಳು, ಮೆರವಣಿಗೆ, ಕಪ್ಪು ಕಾಡಿನ ಹಾಡು, ನನ್ನ ಜನಗಳು ಮತ್ತು ಇತರೆ ಕವಿತೆಗಳು ಅವರ ಪ್ರಮುಖ ಕವಿತಾ ಸಂಕಲನಗಳು.

ಸದನದಲ್ಲಿ ಸಿದ್ದಲಿಂಗಯ್ಯ ಭಾಗ 1 ಮತ್ತು ಭಾಗ 2 ಅವರು ವಿಧಾನಪರಿಷತ್ ಸದಸ್ಯರಾಗಿ ಕರ್ತವ್ಯನಿರ್ವಹಿಸಿದ ಅನುಭವಗಳ ನೈಜ ಅನುಭವ ಕಥನ. ಅವರ ಆತ್ಮಕಥೆ ಊರು ಕೇರಿ ಭಾಗ 1 ಮತ್ತು ಭಾಗ 2ನ್ನು ಕನ್ನಡ ಸಾಹಿತ್ಯ ಎಂದಿಗೂ ಮರೆಯಲಾರದು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ