ಬೆಂಗಳೂರು: ಪ್ರಸಿದ್ಧ ಲೇಖಕ ಹಾಗೂ ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ(86) ನಿಧನರಾಗಿದ್ದಾರೆ.
ಬೆಳಗಿನ ಜಾವ 2 ಗಂಟೆಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ನಿಧನದವಾಗಿರುವುದನ್ನು ನಾರಾಯಣಚಾರ್ಯರ ಕುಟುಂಬ ತಿಳಿಸಿದೆ.
ಕೆ. ಎಸ್. ನಾರಾಯಣಾಚಾರ್ಯ ಅವರು, 1933ರಲ್ಲಿ ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದರು. ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಇವರು ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದರು. ನಂತರ ಪ್ರವಚನ ಮತ್ತು ಕಾದಂಬರಿಕಾರರಾಗಿ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅವರು ರಾಮಾಯಣಾಚಾರ್ಯ ಎಂದೇ ಖ್ಯಾತಿ ಪಡೆದಿದ್ದರು.
ಶ್ರೀ ರಾಮಾವತಾರ ಸಂಪೂರ್ಣವಾದಾ, ಶ್ರೀ ರಾಮಾಯಣ ಪಾತ್ರ ಪ್ರಪಂಚ, ಶ್ರೀ ಮಹಾಭಾರತ ಪಾತ್ರ ಪ್ರಪಂಚ ಸೇರಿ ಹಲವಾರು ಪುಸ್ತಕಗಳನ್ನು ಕೆ. ಎಸ್. ನಾರಾಯಣಾಚಾರ್ಯ ಅವರು ಬರೆದಿದ್ದಾರೆ. ಅಲ್ಲದೇ ಇವರಿಗೆ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ವಿದ್ವನ್ಮಣಿ’, ‘ವೇದಭೂಷಣ’, ‘ವಾಲ್ಮೀಕಿ ಹೃದಯಜ್ಞ’, ‘ರಾಮಾಯಣಾಚಾರ್ಯ’, ‘ಮಹಾಭಾರತಾಚಾರ್ಯ’ ಮೊದಲಾದ ಬಿರುದುಗಳು ವಿವಿಧ ಮಠಾಧೀಶರಿಂದ ಕೆ. ಎಸ್. ನಾರಾಯಣಾಚಾರ್ಯ ದೊರೆತಿದೆ.
ಸದ್ಯ ಕೆ. ಎಸ್.ನಾರಾಯಣಾಚಾರ್ಯ ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ, ಪ್ರಖ್ಯಾತ ವಿದ್ವಾಂಸರು ಹಾಗೂ ಅನೇಕ ಪೌರಾಣಿಕ ಕಾದಂಬರಿಗಳ ರಚನಾಕಾರರಾಗಿದ್ದ ಪ್ರೊ.ಕೆ.ಎಸ್.ನಾರಾಯಣಾಚಾರ್ಯರ ನಿಧನ ನೋವಿನ ಸಂಗತಿ.
ಪ್ರವಚನ ಮತ್ತು ಕಾದಂಬರಿಕಾರರಾಗಿ ಅಪಾರ ಅಭಿಮಾನಿಗಳನ್ನು ಅವರು ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.