NEWSಸಂಸ್ಕೃತಿ

ಪುರಾತನ ದೇವಸ್ಥಾನ ಕೆಡವಿಹಾಕಿರುವುದು ಖಂಡನೀಯ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸರ್ಕಾರ ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನ್ಯಾಯಾಲಯದ ಆದೇಶವಿದ್ದರೂ ಅದ‌ನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವ ಮುನ್ನ ಜಿಲ್ಲಾಡಳಿತ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು ಎಂದು ಕಿಡಿಕಾರಿದ್ದಾರೆ.

ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಯವರು ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ಮುಖ್ಯಮಂತ್ರಿಗಳು ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಹೊಸ ನಿವೇಶನ ಮಂಜೂರು ಮಾಡಿ ಸರ್ವರನ್ನೂ ವಿಶ್ವಾಸಕ್ಕೆ ಪಡೆದು ನೂತನ ದೇವಸ್ಥಾನವನ್ನು ರಾಜ್ಯ ಸರ್ಕಾರವೇ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...