NEWSದೇಶ-ವಿದೇಶರಾಜಕೀಯ

ಸಾಲ ಮರುಪಾವತಿ ಕುರಿತು ಅಂತಿಮ ನಿರ್ಧಾರಕ್ಕೆ ಬನ್ನಿ: ಕೇಂದ್ರ ಸರ್ಕಾರಕ್ಕೆ 2ವಾರದ ಗಡುವು ನೀಡಿದ ಸುಪ್ರೀಂ ಕೋರ್ಟ್!

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೊರೊನಾ ಸೋಂಕಿನಿಂದ ಉಂಟಾಗಿದ್ದ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಲ ಮರುಪಾವತಿಸಲಾಗದ ಸಾಲಗಾರರ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರಕ್ಕೆ ಬನ್ನಿ ಎಂದು ಸುಪ್ರೀಂ ಕೋರ್ಟ್ ಎರಡು ವಾರಗಳ ಅಂತಿಮ ಗಡುವು ನೀಡಿದೆ.

ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಗ್ರಾಹಕರ ಮೇಲಿನ ಆರ್ಥಿಕ ಹೊರೆ ಸರಾಗಗೊಳಿಸುವ ಸಲುವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪರಿಚಯಿಸಿದ ಮೊರಟೋರಿಯಂ ಅವಧಿಯಲ್ಲಿ ಮುಂದೂಡಲ್ಪಟ್ಟ ಇಎಂಐಗಳ ಮೇಲಿನ ಬಡ್ಡಿ ಮನ್ನಾ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಈ ಕುರಿತಂತೆ ಗುರುವಾರ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಸಾಲ ಮರುಪಾವತಿಸಲಾಗದ ಗ್ರಾಹಕರ ವಿಚಾರ ಸಂಬಂಧ ಅಂತಿಮ ನಿರ್ಧಾರಕ್ಕೆ ಬರಬೇಕು ಎಂದು ಅಂತಿಮ ಗಡುವು ನೀಡಿದೆ. ಸಂಕಷ್ಟದಲ್ಲಿರುವ ಗ್ರಾಹಕರಿಗೆ ಅನುಕೂಲವಾಗುವಂತೆ ಮತ್ತು ಇಎಂಐ ಕುರಿತ ಸಮಸ್ಯೆ ನಿವಾರಿಸಿ ಎಂದು ಹೇಳಿದೆ.

ಈ ಎರಡು ವಾರಗಳಲ್ಲಿ ಏನಾಗಲಿದೆ? … ನಾವು ಕೇಂದ್ರ ಸರ್ಕಾರಕ್ಕೆ ಮತ್ತೆ ಸಮಯ ನೀಡುತ್ತಿದ್ದೇವೆ, ಆದರೆ ದೃಢ ಮತ್ತು ಸೂಕ್ತ ನಿರ್ಧಾರ ತೆಗೆದುಕೊಳ್ಳಿ. ಇದು ಕೇಂದ್ರ ಸರ್ಕಾರ ಮತ್ತು ಆರ್ ಬಿಐಗೆ ಕೊನೆಯ ಅವಕಾಶವಾಗಿದ್ದು ಮತ್ತೆ ಪ್ರಕರಣವನ್ನು ಮುಂದೂಡಲು ಸಾಧ್ಯವಿಲ್ಲ ಎಂದೂ ಹೇಳಿದೆ.

ಈ ಹಿಂದಿನ ವಿಚಾರಣೆಯಲ್ಲಿ ಸಾಲ ಮರುಪಾವತಿಸಲಾಗದ ಗ್ರಾಹಕರಿಗೆ ಬ್ಯಾಂಕ್‌ಗಳು ದಂಡ ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ಸುಪ್ರೀಂ ಕೋರ್ಟ್, ಈ ಕುರಿತಂತೆ ಸ್ಪಷ್ಟ ನಿಲುವು ತಳೆಯುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...