NEWSನಮ್ಮಜಿಲ್ಲೆವಿದೇಶ

ಸೋಮವಾರದಿಂದ ಹುಬ್ಬಳ್ಳಿಯಲ್ಲಿಯೂ ಲಾಕ್ ಡೌನ್ ಸಡಿಲ

ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಆರ್ಥಿಕ ಚಟುವಟಿಕೆ l ಸಚಿವ ಜಗದೀಶ ಶೆಟ್ಟರ್

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಾಗಿರುವ ಲಾಕ್ ಡೌನ್‌ನಿಂದ ಹುಬ್ಬಳ್ಳಿ ಶಹರ ಹೊರತುಪಡಿಸಿ ಜಿಲ್ಲೆಯಾದ್ಯಂತ ಈಗಾಗಲೇ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗಿವೆ. ಬರುವ ಸೋಮವಾರ (ಮೇ11) ಹುಬ್ಬಳ್ಳಿಯ ಸೀಲ್‌ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ವಾಣಿಜ್ಯ, ವಹಿವಾಟುಗಳನ್ನು ನಡೆಸಲು ಅವಕಾಶ ಕಲ್ಪಿಸಲು  ಆದೇಶ ಹೊರಡಿಸಲಾಗುವುದು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕೊರೊನಾ ನಿಯಂತ್ರಣ ಮತ್ತು ಲಾಕ್ ಡೌನ್ ಸಡಿಲಿಕೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ಅಂಗಡಿ ಮತ್ತು ಮುಂಗಟ್ಟುಗಳ ಕಾಯ್ದೆ ಪ್ರಕಾರ ಸ್ಥಾಪನೆಯಾಗಿರುವ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯ ವಾಣಿಜ್ಯ, ವಹಿವಾಟುಗಳು ಈಗಾಗಲೇ ಜಿಲ್ಲೆಯ ಧಾರವಾಡ, ಕಲಘಟಗಿ, ಅಳ್ನಾವರ, ಕುಂದಗೋಳ, ಅಣ್ಣಿಗೇರಿ ಹಾಗೂ ನವಲಗುಂದ ತಾಲೂಕುಗಳಲ್ಲಿ ಪುನರಾರಂಭವಾಗಿವೆ. ಮೇ 11 ರಿಂದ ಹುಬ್ಬಳ್ಳಿಯ ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದ ಎಲ್ಲಾ ಕಡೆಗಳಲ್ಲೂ ವಿವಿಧ ವ್ಯಾಪಾರ ಚಟುವಟಿಕೆ ಪ್ರಾರಂಭಕ್ಕೆ ವಾರದ ಎಲ್ಲಾ ದಿನಗಳಲ್ಲಿಯೂ ಅವಕಾಶ ಕಲ್ಪಿಸಿ ಸಮರ್ಪಕ ಆದೇಶ ಹೊರಡಿಸಬೇಕು ಎಂದು ಡಿಸಿಗೆ ಸೂಚಿಸಿದರು.

ಲಾಕ್‌ಡೌನ್ ಸಡಿಲಿಕೆಯ ಈ ಅವಕಾಶವನ್ನು ಜಿಲ್ಲೆಯ ಜನತೆ ಎಚ್ಚರಿಕೆಯಿಂದ ಬಳಸಿಕೊಳ್ಳಬೇಕು.  ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಅನಗತ್ಯ ತಿರುಗಾಟಕ್ಕೆ ಸ್ವಯಂ ನಿರ್ಬಂಧ  ಹಾಕಿಕೊಳ್ಳಬೇಕು. ಮಾಸ್ಕ್ ಧರಿಸದೇ ಇದ್ದರೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ವಿಧಿಸುವ ಕಾರ್ಯ ಚುರುಕುಗೊಳಿಸಬೇಕು. ಜನತೆ ಸಹಕರಿಸಿದರೆ ಕೊರೊನಾ ನಿಯಂತ್ರಣ ಸುಲಭ ಸಾಧ್ಯವಾಗುತ್ತದೆ ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ಖಾಸಗಿ ಆಸ್ಪತ್ರೆಗಳು ಸಮರ್ಪಕವಾಗಿ ಸೇವೆ ನೀಡದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಎಸ್ ಡಿ ಎಂ ಸೇವೆ ಪ್ರಾರಂಭಿಸಿದೆ. ಈ ಕುರಿತು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವಿರೇಂದ್ರ ಹೆಗಡೆಯವರೊಂದಿಗೆ ಮಾತನಾಡಿದಾಗ ಅವರು ಸರ್ಕಾರದೊಂದಿಗೆ ಎಲ್ಲಾ ಸಹಕಾರ ನೀಡಲು ಎಸ್ ಡಿ ಎಂ ಆಸ್ಪತ್ರೆಗೆ ನಿರ್ದೇಶನ ನೀಡಿದ್ದಾರೆ ಎಂದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಹೊರರಾಜ್ಯಗಳಿಂದ ಬರುವ ಜನರಿಗೆ ಈಗ ಅವಕಾಶ ದೊರೆತಿದೆ ಎಲ್ಲರನ್ನೂ ಕೃಷಿ ವಿ.ವಿ.ಆವರಣದಲ್ಲಿ ತಪಾಸಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅತಿಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ್, ತಮಿಳುನಾಡು ಹಾಗೂ ದೆಹಲಿ ರಾಜ್ಯಗಳಿಂದ ಬರುವ ಎಲ್ಲರನ್ನೂ ಸರ್ಕಾರಿ ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ ಮಾತನಾಡಿ, ಸದ್ಯ ಕಿಮ್ಸ್ ಹೊರರೋಗಿ ವಿಭಾಗದಲ್ಲಿ 800, ಒಳರೋಗಿ  500 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ, ತುರ್ತು ಚಿಕಿತ್ಸಾ ಘಟಕದಲ್ಲಿಯೂ ರೋಗಿಗಳಿದ್ದಾರೆ. ಕೋವಿಡ್ ಪ್ರಯೋಗಾಲಯದಲ್ಲಿ ಪ್ರತಿನಿತ್ಯ ಸುಮಾರು 250 ಕ್ಕೂ ಹೆಚ್ಚು ವರದಿಗಳು ಸಿದ್ಧವಾಗುತ್ತಿವೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಪ್ರಾಯೋಗಿಕ ಪ್ಲಾಸ್ಮಾ ಥೆರಪಿ ಕೈಗೊಳ್ಳಲು  ಐಸಿಎಂ ಆರ್ ನಿಂದ ಕಿಮ್ಸ್ ಗೆ ಅನುಮೋದನೆ ದೊರೆತಿದೆ ಎಂದರು.

ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ, ಕುಸುಮಾವತಿ ಶಿವಳ್ಳಿ, ವಿಧಾನಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ಶ್ರೀನಿವಾಸ ಮಾನೆ, ಮಹಾನಗರ ಪೆÇಲೀಸ್ ಆಯುಕ್ತ ಆರ್.ದಿಲೀಪ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ವರ್ತಿಕಾ ಕಟಿಯಾರ್, ಜಿಪಂ ಸಿಇಓ ಡಾ.ಬಿ.ಸಿ.ಸತೀಶ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಕಿಮ್ಸ್ ನ ಡಾ.ಲಕ್ಷ್ಮೀಕಾಂತ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮೋಹನ ಭರಮಕ್ಕನವರ ಮತ್ತಿತರರು ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ