NEWSಆರೋಗ್ಯದೇಶ-ವಿದೇಶ

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಲಖನೌ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ   ಮುಲಾಯಂ ಸಿಂಗ್ ಯಾದವ್ ಅವರನ್ನು ಭಾನುವಾರ ರಾತ್ರಿ ಲಖನೌನ ಮೆದಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಟ್ಟೆ ನೋವಿನ ಸಮಸ್ಯೆಯಿಂದಾಗಿ ಯಾದವ್ ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಕಳೆದ ಐದು ದಿನಗಳಿಂದಲ್ಲೂ ಅವರಿಗೆ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಭಾನುವಾರ ರಾತ್ರಿ ನೋವು ಹೆಚ್ಚಾಗಿದ್ದರಿಂದ ಕರೆದುಕೊಂಡು ಬಂದು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ದೀರ್ಘಕಾಲದ ಮಲಬದ್ಧತೆಯಿಂದ ಬಳಲುತ್ತಿದ್ದ ಸಿಂಗ್​ಗೆ ಕೊಲೊನೋಸ್ಕೋಪಿ ಸಹ ನಡೆಸಲಾಗಿದೆ.  ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಈ ವಿಷಯವಾಗಿ ಮಾತನಾಡುತ್ತಾ,  ಆರೋಗ್ಯ ತಪಾಸಣೆಗಾಗಿ ಬುಧವಾರ ಮೆದಂತ ಆಸ್ಪತ್ರೆಗೆ ಹೋಗಿದ್ದರು, ಆದರೆ ಅವರ ಹೊಟ್ಟೆ ಮತ್ತು ಮೂತ್ರ ಸಂಬಂಧಿತ ಸಮಸ್ಯೆ ಉಲ್ಬಣಿಸಿದ ಕಾರಣ ಅವರನ್ನು ವೈದ್ಯರು ದಾಖಲಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇತ್ತ ಮುಲಾಯಂ ಸಿಂಗ್ ಯಾದವ್ ಸೋದರ ಶಿವಪಾಲ್ ಸಿಂಗ್ ಯಾದವ್ “ಮುಲಾಯಂ ಆರೋಗ್ಯ ಉತ್ತಮವಾಗಿದೆ” ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ