ಲಖನೌ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರನ್ನು ಭಾನುವಾರ ರಾತ್ರಿ ಲಖನೌನ ಮೆದಂತ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಟ್ಟೆ ನೋವಿನ ಸಮಸ್ಯೆಯಿಂದಾಗಿ ಯಾದವ್ ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಕಳೆದ ಐದು ದಿನಗಳಿಂದಲ್ಲೂ ಅವರಿಗೆ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಭಾನುವಾರ ರಾತ್ರಿ ನೋವು ಹೆಚ್ಚಾಗಿದ್ದರಿಂದ ಕರೆದುಕೊಂಡು ಬಂದು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ದೀರ್ಘಕಾಲದ ಮಲಬದ್ಧತೆಯಿಂದ ಬಳಲುತ್ತಿದ್ದ ಸಿಂಗ್ಗೆ ಕೊಲೊನೋಸ್ಕೋಪಿ ಸಹ ನಡೆಸಲಾಗಿದೆ. ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಈ ವಿಷಯವಾಗಿ ಮಾತನಾಡುತ್ತಾ, ಆರೋಗ್ಯ ತಪಾಸಣೆಗಾಗಿ ಬುಧವಾರ ಮೆದಂತ ಆಸ್ಪತ್ರೆಗೆ ಹೋಗಿದ್ದರು, ಆದರೆ ಅವರ ಹೊಟ್ಟೆ ಮತ್ತು ಮೂತ್ರ ಸಂಬಂಧಿತ ಸಮಸ್ಯೆ ಉಲ್ಬಣಿಸಿದ ಕಾರಣ ಅವರನ್ನು ವೈದ್ಯರು ದಾಖಲಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಇತ್ತ ಮುಲಾಯಂ ಸಿಂಗ್ ಯಾದವ್ ಸೋದರ ಶಿವಪಾಲ್ ಸಿಂಗ್ ಯಾದವ್ “ಮುಲಾಯಂ ಆರೋಗ್ಯ ಉತ್ತಮವಾಗಿದೆ” ಎಂದು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail