ಮಡಿಕೇರಿ : ಜಿಲ್ಲೆಯ ಜಂಬೂರು ಮತ್ತು ಮದೆನಾಡು ಬಳಿ ಸಂತ್ರಸ್ತರಿಗೆ ನಿರ್ಮಿಸಿರುವ ಒಟ್ಟು 463 ಮನೆಗಳನ್ನು ಜೂನ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಸ್ತಾಂತರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ನಗರದ ಜಿ.ಪಂ.ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಮುಂಗಾರು ಎದುರಿಸುವಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಈಗಾಗಲೇ ಮೇ, 31 ರವರೆಗೆ ಲಾಕ್‍ಡೌನ್ ಮುಂದುವರಿದಿರುವುದರಿಂದ ಜೂನ್ ಮೊದಲ ವಾರದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಆಹಾರ ಕಿಟ್ ವಿತರಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಕಟಿಸಿರುವ ಸರ್ಕಾರದ ವಿಶೇಷ ಪ್ಯಾಕೇಜ್‍ಗಳನ್ನು ತಲುಪಿಸಲಾಗುತ್ತಿದೆ ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail