Please assign a menu to the primary menu location under menu

NEWSದೇಶ-ವಿದೇಶರಾಜಕೀಯ

ದೇಶೀಯ ವಸ್ತುಗಳ ಬಳಸುತ್ತೇವೆಂದು ಹೊಸ ವರ್ಷಕ್ಕೆ ಸಂಕಲ್ಪ ತೊಡೋಣ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ನ್ಯೂಡೆಲ್ಲಿ: ಜನರು ವಿದೇಶಿ ವಸ್ತುಗಳ ಬದಲು ದೇಶೀಯ ವಸ್ತುಗಳನ್ನ ಬಳಸುತ್ತೇವೆಂದು ಹೊಸ ವರ್ಷಕ್ಕೆ ಹೊಸ ಸಂಕಲ್ಪ ತೊಟ್ಟು ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ಕಾರಣವಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ವರ್ಷದ ತಮ್ಮ ಕೊನೆಯ ‘ಮನ್ ಕೀ ಬಾತ್’ ರೇಡಿಯೋ ಶೋನಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಶ್ವದರ್ಜೆಯ ಉತ್ಪನ್ನಗಳನ್ನು ದೇಶದಲ್ಲಿ ತಯಾರಿಸಿ ಆತ್ಮನಿರ್ಭರ್ ಭಾರತ್ ಕನಸನ್ನು ಸಾಕಾರಗೊಳಿಸುವಂತೆ ಔದ್ಯಮಿಕ ಕ್ಷೇತ್ರದ ಮಂದಿಗೆ ಮನವಿ ಮಾಡಿದರು.

ಜನರು ತಾವು ಬಳಸುವ ವಸ್ತುಗಳನ್ನ ಪಟ್ಟಿ ಮಾಡಿ, ಅದರಲ್ಲಿ ವಿದೇಶಗಳಲ್ಲಿ ಉತ್ಪಾದಿಸಿದ ವಸ್ತುಗಳನ್ನ ಗುರುತಿಸಬೇಕು. ಅವುಗಳ ಬದಲು ದೇಶೀಯವಾಗಿ ತಯಾರಾದ ವಸ್ತುಗಳನ್ನ ಬಳಸಬೇಕು. ಜನರು ಇದನ್ನೆ ಹೊಸ ವರ್ಷದ ಸಂಕಲ್ಪವಾಗಿ ಮಾಡಿಕೊಳ್ಳಬೇಕು ಎಂದು ಪ್ರಧಾನಿ ಕರೆ ನೀಡಿದರು.

ಗತಿಸಿಹೋಗುತ್ತಿರುವ ಈ ವರ್ಷದಲ್ಲಿ ಸಮಾಜದಲ್ಲಿ ಸ್ವಾವಲಂಬಿ ಭಾರತಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಯೊಂದು ಮನೆಯಲ್ಲೂ ವೋಕಲ್ ಫಾರ್ ಲೋಕಲ್ ಕರೆಗೆ ಜನರು ಧ್ವನಿಗೂಡಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ನಮ್ಮ ಉತ್ಪನ್ನಗಳು ಜಾಗತಿಕ ಗುಣಮಟ್ಟವನ್ನು ಮುಟ್ಟುವಂತೆ ನೋಡಿಕೊಳ್ಳಬೇಕು ಎಂದರು.

ಒಂದೇ ವರ್ಷದಲ್ಲಿ ನಮ್ಮ ದೇಶವಾಸಿಗಳ ಮನಸಿನಲ್ಲಿ ದೊಡ್ಡ ಬದಲಾವಣೆಯಾಗಿದೆ ಎಂದು ಹೇಳಿದ ಅವರು ಕಾಶ್ಮೀರೀ ಕೇಸರಿ ವಸ್ತುವನ್ನು ಪ್ರಸ್ತಾಪಿಸಿ, ಅದನ್ನು ಜಾಗತಿಕ ಜನಪ್ರಿಯ ಬ್ರ್ಯಾಂಡ್ ಆಗಿ ಮಾಡಲು ಸರ್ಕಾರ ಪ್ರಯತ್ನಿಸುತ್ತಿರುವ ಸಂಗತಿಯನ್ನು ತಿಳಿಸಿದರು.

ಭಾರತದಲ್ಲಿ ಯಾರಾದ ಗೊಂಬೆ ಮೊದಲಾದ ವಸ್ತುಗಳಿಗೆ ಅಂಗಡಿಗಳು ಒತ್ತು ನೀಡುತ್ತಿವೆ. ಗ್ರಾಹಕರೂ ಕೂಡ ದೇಶೀಯ ವಸ್ತುಗಳಿಗೆ ಬೇಡಿಕೆ ಇಟ್ಟಿದ್ದಾರೆ. ಇದು ನಮ್ಮ ಮಾನಸಿಕತೆಯಲ್ಲಾಗಿರುವ ಬಹುದೊಡ್ಡ ಪರಿವರ್ತನೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕೊರೊನಾ ವೈರಸ್​ನಿಂದ ಉದ್ಭವವಾದ ಸಂಕಷ್ಟದ ಪರಿಸ್ಥಿತಿಯಲ್ಲಿ ಆನ್​ಲೈನ್ ಶಿಕ್ಷಣಕ್ಕೆ ಶಿಕ್ಷಕರು ಕ್ರಿಯಾಶೀಲತೆ ತೋರಿದ್ದಾರೆ. ಶಿಕ್ಷಣ ಇಲಾಖೆಯ ದೀಕ್ಷಾ ಪೋರ್ಟಲ್​ನಲ್ಲಿ ಈ ಶಿಕ್ಷಣದ ಪಾಠಗಳನ್ನು ಅಪ್​ಲೋಡ್ ಮಾಡುವಂತೆ ಕರೆ ನೀಡಿದ ಪ್ರಧಾನಿ, ಇದರಿಂದ ದೇಶದ ಮೂಲೆ ಮೂಲೆಯಲ್ಲಿರುವ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ, ವನ್ಯಜೀವಿ ಸಂರಕ್ಷಣೆ ವಿಚಾರವನ್ನು ಪ್ರಸ್ತಾಪಿಸಿದ ಅವರು, 2014ರಿಂದ 2018ರವರೆಗೆ ಭಾರತದಲ್ಲಿ ಚಿರತೆಗಳ ಸಂಖ್ಯೆ ಶೇ. 60ರಷ್ಟು ಹೆಚ್ಚಾಗಿರುವುದು ಈ ವರ್ಷದ ಅತಿದೊಡ್ಡ ಸಾಧನೆ. ಕಳೆದ ಕೆಲ ವರ್ಷಗಳಿಂದ ಸಿಂಹ ಹಾಗೂ ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅರಣ್ಯ ಪ್ರದೇಶಗಳ ವ್ಯಾಪ್ತಿಯೂ ಹೆಚ್ಚಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC 4 ನಿಗಮಗಳ ಬಸ್‌ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್‌ KSRTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ ನ್ಯೂಡೆಲ್ಲಿ: ದಲೈವಾಲ ಪ್ರಾಣಕ್ಕೆ ಕುತ್ತು ಬಂದರೆ ದೇಶದ ರೈತರು ಕೇಂದ್ರ ಸರ್ಕಾರದ ಮರಣ ಶಾಸನ ಬರೆಯಬೇಕಾಗುತ್ತದೆ ಎಚ್ಚರ ಜ್ವರ ಬಂದಾಗ ಎಳನೀರು ಕುಡಿಯುವುದು ಒಳ್ಳೆಯದೇ..ಏಕೆಂದರೆ? ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್‌ ದರ ಹೆಚ್ಚಳ: ಪಟ್ಟಿ ರಿಲೀಸ್​ ಮಾಡಿದ ಸಾರಿಗ... KSRTC: ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮರೆತಿದ್ದ ಬಿಜೆಪಿಯವರು ಈಗ ಬಸ್ ದರ ಹೆಚ್ಚಳ ಖಂಡಿಸುತ್ತಾರೆ- ರಾಮಲಿಂಗಾರೆಡ್ಡಿ