NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಮಂಡ್ಯ: ರೈತರಿಗೆ ಹೆಣ್ಣುಕೊಡುತ್ತಿಲ್ಲ ಎಂದು ಸಚಿವ ಸಿಪಿವೈ ಬಳಿ ಅಳಲು ತೋಡಿಕೊಂಡ ಯುವ ರೈತ ಪ್ರವೀಣ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಂಡ್ಯ: ಹೊಲ ಗದ್ದೆಗಳಲ್ಲಿ ಕೆಲಸ ಮಾಡುವ ಯುವ ರೈತರಿಗೆ ಹೆಣ್ಣುಕೊಡುತ್ತಿಲ್ಲ. ಇನ್ನು ಎಲ್ಲೋ ಒಂದು ಕಡೆ ಸಿಟಿಯಲ್ಲಿ ಕೆಲಸದಲ್ಲಿದ್ದಾನೆ ಎಂದರೆ ಅಂಥವರಿಗೆ ಹೆಣ್ಣುಕೊಡುತ್ತಾರೆ. ಹೀಗಾದರೆ ರೈತರಾದ ನಾವು ಎಲ್ಲಿಗೆ ಹೋಗಬೇಕು. ಈ ಸಮಸ್ಯೆಯನ್ನು ಪರಿಹರಿಸಲು ನೀವು ಏನಾದರೂ ಒಂದು ಹೊಸ ಯೋಜನೆಯನ್ನು ತನ್ನಿ ಎಂದು ಸಚಿವ ಯೋಗೇಶ್ವರ್‌ ಅವರಿಗೆ ಮಂಡ್ಯದ ಯುವ ರೈತನೊಬ್ಬ ಮನವಿ ಮಾಡಿದ್ದಾನೆ.

ರೈತ ದೇಶದ ಬೆನ್ನೆಲುಬು, ರೈತನಿಲ್ಲದ ದೇಶವಿಲ್ಲ, ರೈತ ಇಡೀ ದೇಶಕ್ಕೆ ಅನ್ನ ನೀಡುವ ಅನ್ನದಾತ ಎಂದು ಪ್ರತಿಯೊಬ್ಬರೂ ಹೇಳುತ್ತಾರೆ. ಆದರೆ ವಾಸ್ತವದಲ್ಲಿ ರೈತನಿಗೆ ಹೆಣ್ಣು ಕೊಡಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ 28 ವರ್ಷದ ರೈತ ಪ್ರವೀಣ್ ಎಂಬುವರು ರೈತನೆಂಬ ಕಾರಣಕ್ಕೆ ತನಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಯೋಗೇಶ್ವರ್ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾನೆ.

ನಾನು ಮದುವೆಯಾಗಲು ಯಾರೂ ಕೂಡ ಹೆಣ್ಣು ಕೊಡುತ್ತಿಲ್ಲ. ರೈತನೆಂಬ ಕಾರಣಕ್ಕಾಗಿ ಈ ರೀತಿಯ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆ ಪರಿಹರಿಸಲು ಒಂದು ಯೋಜನೆ ರೂಪಿಸಿ ಸರ್‌ ಎಂದು ಕೇಳಿಕೊಂಡಿದ್ದಾನೆ.

ಸರ್ ನಾನೊಬ್ಬ 28 ವರ್ಷದ ಯುವಕ, ನಾನು ರೇಷ್ಮೆ ಕೃಷಿ ಮಾಡುತ್ತಿದ್ದೇನೆ. ಅದರಿಂದ ಒಳ್ಳೆಯ ಸಂಪಾದನೆಯನ್ನೂ ಕೂಡ ಮಾಡುತ್ತಿದ್ದೇನೆ. ಆದರೆ ನಾನು ಮದುವೆಯಾಗಲು ಹುಡುಗಿ ಕೇಳಲು ಹೋದರೆ, ನನಗೆ ಹುಡುಗಿ ಕೊಡುತ್ತಿಲ್ಲ. ನಾವು ರೈತರಿಗೆ ಕೊಡಲ್ಲ. ಸಿಟಿಯಲ್ಲಿ ಇದ್ದವರಿಗೆ ಕೊಡುತ್ತೇವೆ ಎಂದು ಪೋಷಕರು ಹೇಳುತ್ತಿದ್ದಾರೆ. ಇದು ನನ್ನ ಸಮಸ್ಯೆ ಮಾತ್ರವಲ್ಲ, ಇಡೀ ರೈತ ಯುವಕರ ಸಮಸ್ಯೆಯಾಗಿದ್ದು, ಈ ಸಮಸ್ಯೆಯನ್ನು ಪಡಿಹರಿಸುವ ಸಲುವಾಗಿ ಒಂದು ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ನಿಮ್ಮಲ್ಲಿ ಮವಿ ಮಾಡುತ್ತೇನೆ ಎಂದು ಕೇಳಿಕೊಂಡಿದ್ದಾನೆ.

ಅಂತರ್‌ಜಾತಿ ಮದುವೆಯಾದವರಿಗೆ 3 ಲಕ್ಷರೂ. ಕೊಡ್ತೀರಾ, ಹಾಗೆಯೇ ರೈತನನ್ನು ಮದುವೆಯಾದ್ರೆ ರೈತರಿಗೆ ಜನಿಸುವ ಮಕ್ಕಳಿಗೆ ಮಗುವಿಗೆ ವಿಮೆಯಾಗಲಿ ಅಥವಾ ಪ್ರೋತ್ಸಾಹ ಧನವನ್ನಾಗಲಿ ನೀಡುವಂತಹ ಕಾಯ್ದೆಯನ್ನು ಜಾರಿಗೊಳಿಸಿ. ಈ ಕುರಿತು ಸಿಎಂ ಸರ್ ಜೊತೆ ಚರ್ಚಿಸಿ ಎಂದು ರೈತ ಪ್ರವೀಣ್ ಮನವಿ ಮಾಡಿಕೊಂಡಿದ್ದು, ಈ ವೇಳೆ ಪ್ರತಿಕ್ರಿಯಿಸಿದ ಯೋಗೇಶ್ವರ್ ಅಣ್ಣ ನೀನು ಹೇಳುತ್ತಿರುವುದು ಸರಿ ಇದೆ. ಇದು ಗಂಭೀರ ಸಮಸ್ಯೆಯಾಗಿದ್ದು, ಈ ಕುರಿತು ಯೋಚನೆ ಮಾಡೋಣ ಎಂದಿದ್ದಾರೆ.

ಇನ್ನು ಈ ವಿಚಾರವಾಗಿ ಯುವ ರೈತರು ಪ್ರವೀಣ್‌ ಕೇಳಿರುವ ಯೋಜನೆ ಮತ್ತು ಕಾಯ್ದೆ ಸರಿಯಾಗಿ ಇದೆ ಈ ಬಗ್ಗೆ ರೈತ ಪರ ಕಾಳಜಿ ಇರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಒಂದು ಉತ್ತಮ ನಿರ್ಧಾರ ತೆಗೆದುಕೊಳ್ಳಬೇಕು. ಈ ಮೂಲಕ ಯುವ ರೈತರಿಗೆ ಒಳ್ಳೆಯದು ಮಾಡಬೇಕು ಎಂದು ಮನವಿ ಮಾಡುತ್ತಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು