NEWSನಮ್ಮಜಿಲ್ಲೆರಾಜಕೀಯ

ಮಂಡ್ಯ ನನ್ನ ಕರ್ಮ ಭೂಮಿ, ಕೊನೆ ಉಸಿರಿರುವವರೆಗೂ ಹೋರಾಟ ಮಾಡ್ತೀನಿ: ನಿಖಿಲ್ ಕುಮಾರಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ನನ್ನ ಕರ್ಮಭೂಮಿ ಮಂಡ್ಯನೇ ಹೀಗಾಗಿ ಅಭಿಮಾನಿಗಳು, ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ, ಗೌರವ ಇಟ್ಟಿದ್ದಾರೆ. ಅವರಿಗಾಗಿ ನನ್ನ ಕೊನೆ ಉಸಿರಿರುವವರೆಗೂ  ಹೋರಾಟ ಮಾಡುತ್ತೇನೆ  ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಭಾನುವಾರ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು. ಮತ್ತೊಮ್ಮೆ ರೈತರ ಆತ್ಮಹತ್ಯೆ ದಿನನಿತ್ಯ ನಡೆಯುತ್ತಿದೆ. ಇದು ನಿಲ್ಲಬೇಕು. ದೇಶದ ಬೆನ್ನೆಲುಬೆ ಇಲ್ಲವಾದರೆ ನಾವು ಉಳಿಯಲು ಸಾಧ್ಯವೆ ಎಂಬುದನ್ನು ಪ್ರತಿಯೊಬ್ಬ ರಾಜಕೀಯ ಮುಖಂಡರು ಅರ್ಥಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ರೈತರ ಆತ್ಮಹತ್ಯೆ ತಡೆಗೆ ವಿಶೇಷ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ರೈತನ ಮನೆಗೆ ಸಚಿವರು ಬಂದು ಹೋದ ವಿಚಾರ ತಿಳಿದ ನಿಖಿಲ್, ನಾನು ಬರುತ್ತೇನೆ ಎಂದು ತಿಳಿದು ರೈತನ ಮನೆಗೆ ಭೇಟಿ ಕೊಟ್ಟರಲ್ಲ ಅದು ಸಂತೋಷದ ವಿಚಾರ. ನಾನು ಬಂದಿಲ್ಲ ಅಂದರೆ ಸಚಿವರು ಬರುತ್ತಿರಲಿಲ್ಲವೇನೊ ಎಂದು ಹೇಳಿದರು.

ಇನ್ನು ನಂಜೇಗೌಡ ಅವರು ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಡ್ಡಿ ಕಟ್ಟಲಾಗದೆ, ಬೆಳೆಗೆ ಸರಿಯಾದ ಬೆಲೆ ಸಿಗದೇ ಇವತ್ತು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಮುಂದಿನ ದಿನಗಳಲ್ಲಿ ರೈತರು ಸಾಲ ಮಾಡದ ರೀತಿ ಕಾರ್ಯಕ್ರಮ ಮಾಡೋದು ಕುಮಾರಣ್ಣನ ಕನಸಾಗಿತ್ತು. ಸಾಂತ್ವನ ಹೇಳಿ ನಾವು ಹೋಗಬಹುದು, ಆದರೆ ಸರ್ಕಾರ ರೈತರ ಆತ್ಮಹತ್ಯೆ ನಿಲ್ಲಿಸುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು.

ರಾಮನಗರ ಜನತೆ ನನ್ನ ತಂದೆಯನ್ನು ರಾಜಕೀಯವಾಗಿ ಬೆಳೆಸಿದ್ದಾರೆ. ಅವರಿಗೆ ಆಸೆ ನಿಖಿಲ್ ಇಲ್ಲಿಗೂ ಬರಲಿ ಎಂದು. ನಾನು ಎಲ್ಲಾ ಕಡೆ ಓಡಾಡುತ್ತೇನೆ ಎಂದರು.

ಜನರ ಜತೆಯಲ್ಲಿ ನಾವಿರುತ್ತೇವೆ ಜನ ನಮ್ಮ ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ. ನನ್ನ ಮೊದಲ ಆಯ್ಕೆ ಪಕ್ಷ ನಂತರ ಸಿನಿಮಾ. ಮೊದಲು ಪಕ್ಷ ಕೊಟ್ಟ ಜವಾಬ್ದಾರಿ ಕಡೆಗೆ ನಾನು ಗಮನಹರಿಸುತ್ತೇನೆ ಎಂದು ಹೇಳಿದರು.

ನಂತರ ಮುಂದಿನ ಎಂಪಿ ನಿಖಿಲ್ ಎಂಬ ಅಭಿಮಾನಿಗಳ ಘೋಷಣೆ ವಿಚಾರವಾಗಿ ಮಾತನಾಡಿ, ಅಭಿಮಾನಿಗಳು, ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ, ಗೌರವ ಇಟ್ಟಿದ್ದಾರೆ. ನನ್ನ ಕೊನೆ ಉಸಿರಿರುವವರೆಗೂ ಅವರಿಗಾಗಿ ಹೋರಾಟ ಮಾಡುತ್ತೇನೆ. ಮುಂದೇನು ನನ್ನ ಕರ್ಮ ಭೂಮಿ ಮಂಡ್ಯನೇ, ನನ್ನ ಆಯ್ಕೆ ಮಂಡ್ಯನೆ. ಸೋಲು ಗೆಲುವು ರಾಜಕಾರಣದಲ್ಲಿ ಸಹಜ. ಹಾಗಾಂತ ಯಾವ ರಾಜಕಾರಣಿಗಳು ಮನೆಯಲ್ಲಿ ಕೂರಲ್ಲ ಎಂದು ತಿಳಿಸಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...