NEWSರಾಜಕೀಯ

ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ಗೆ ಕೊರೊನಾ ದೃಢ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಷ್‌ ಅವರಿಗೆ ಕೊರೊನಾ ಪಾಸಿಟಿವ್‌ ಬಂದಿದೆ. ಈ ಬಗ್ಗೆ ಅವರೆ ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ದೃಢಪಡಿಸಿದ್ದಾರೆ.

ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ಇದರ ನಡುವೆಯೂ ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ ಎಂದು ತಿಳಿಸಿದ್ದಾರೆ.

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್‌ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಸಂಸದೆ ಕೇಳಿಕೊಂಡಿದ್ದಾರೆ.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ