NEWSನಮ್ಮಜಿಲ್ಲೆ

ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ-ಜೆಡಿಎಸ್‌ ಶಾಸಕರ ನಡುವೆ ಸಮರ

ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳಕ್ಕೆ ಕಾರಣ ಕಂಡುಕೊಳ್ಳಲು ಡಿಸಿ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಗಲಾಟೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜೆಡಿಎಸ್‌ ಶಾಸಕರ ನಡುವೆ ಇಂದು ನಡೆದ ಜಟಾಪಟಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಸಭೆ ಸಾಕ್ಷಿಯಾಯಿತು.

ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದಕ್ಕೆ ಕಾರಣ ಏನು ಎಂಬುದನ್ನು ಕಂಡುಕೊಳ್ಳಲು ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳ ಶಾಸಕರು ಮತ್ತು ತಾಲೂಕು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆ ಸೇರಬೇಕು ಎಂದು ಈ ಹಿಂದೆ ನಿರ್ಧರಿಸಿದಂತೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಸೇರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಮತ್ತು ಜೆಡಿಎಸ್‌ ಶಾಸಕರಾದ ಸುರೇಶ್‌ಗೌಡ, ರವೀಂದ್ರ ಶ್ರೀಕಂಠೇಗೌಡ ಅವರ ನಡುವೆ ಕೊರೊನಾ ನಿಯಂತ್ರಣ ಸಂಬಂಧ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತ ತಲುಪಿತು. ಈ ವೇಳೆ ಅಧಿಕಾರಿಗಳು ಮತ್ತು ಇನ್ನುಳಿದ ಶಾಸಕರು ಅವರನ್ನು ಸಮಾಧಾನಪಡಿಸಿ ಸಭೆ ಮುಂದುವರಿಯಲು ಅನುವು ಮಾಡಿಕೊಟ್ಟರು.

ಸಭೆ ಮತ್ತೆ ಆರಂಭ ಬಳಿಕ ಇನ್ನೊಮ್ಮೆ ಸಚಿವರು ಮತ್ತು ಶಾಸಕರ ನಡುವೆ ಗಲಾಟೆ ಶುರುವಾಗಿದೆ ಈ ವೇಳೆ ಒಬ್ಬರಿಗೊಬ್ಬರು ಏಕವಚನದಲ್ಲೇ ನಿಂದಿಸಿಕೊಂಡು ಸಭೆಯಿಂದ ಸಚಿವರು ಹೊರ ನಡೆದ ಘಟನೆ ನಡೆದಿದೆ. ಈ ಸಮಯದಲ್ಲಿ ಮಾಧ್ಯವದವರನ್ನು ಸಭೆಯಿಂದ ಹೊರ ಕಳುಹಿಸಿದ್ದರು. ಇದರಿಂದ ಯಾವ ಕಾರಣಕ್ಕೆ ಸಚಿವರು ಮತ್ತು ಶಾಸಕರ ನಡುವೆ ಜಗಳವಾಯಿತು ಎಂಬುವುದು ಸ್ಪಷ್ಟವಾಗಿ ತಿಳಿಯದಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಒಟ್ಟಾರೆ ಜಿಲ್ಲಾ ಉಸ್ತುವಾರಿ ಸಚಿವರು ಬಿಜೆಪಿಯವರಾಗಿದ್ದು, ಈ ಹಿಂದೆ ಜೆಡಿಎಸ್‌ನಲ್ಲಿ ಗೆದ್ದು ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿ ಮತ್ತೆ ಗೆದ್ದುಬಂದು ಸಚಿವರಾಗಿದ್ದಾರೆ. ಇನ್ನು ಜಿಲ್ಲೆಯ ಉಳಿದ ಎಲ್ಲಾ 6 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಶಾಸಕರಿರುವುದರಿಂದ ಉಸ್ತುವಾರಿ ಸಚಿವರನ್ನು ಇವರು ಕ್ಯಾರೆ ಎನ್ನುತ್ತಿಲ್ಲ. ಇದರಿಂದ ಒಬ್ಬರಿಗೊಬ್ಬರು ನಾವು ಜನ ಪ್ರತಿನಿಧಿಗಳು ಎಂಬುದನ್ನು ಮರೆತು ನಿಂದನೆಯಲ್ಲಿ ತೊಡುಗುತ್ತಿದ್ದಾರೆ.

ಇದು ಕ್ಷೇತ್ರದ ಜನತೆಯ ನಡುವೆ ಇವರ ಸಣ್ಣತನ ಪ್ರದರ್ಶನವಾಗುತ್ತಿದ್ದು, ಅಭಿವೃದ್ಧಿಕಾರ್ಯಗಳಿಗೂ ಇದು ಹಿನ್ನಡೆಯಾಗುತ್ತಿದೆ ಎಂಬ ಮಾತು ಜಿಲ್ಲೆಯಲ್ಲಿ ಕೇಳಿಬರುತ್ತಿದೆ. ಮತ್ತೊಂದೆಡೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳಿಗೂ ಇದು ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ.

ಇವರ ಪಕ್ಷದ ವಿಚಾರಗಳು ಏನೇ ಇದ್ದರು ಅದನ್ನು ಬದಿಗೊತ್ತಿ ಕ್ಷೇತ್ರದ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂಬುವುದು ಜಿಲ್ಲೆಯ ಪ್ರಜ್ಞಾವಂತ ನಾಗರಿಕರ ಒತ್ತಾಯವಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

 

 

Leave a Reply