NEWSಆರೋಗ್ಯದೇಶ-ವಿದೇಶನಮ್ಮರಾಜ್ಯ

ಕಾಂಗ್ರೆಸ್ ಹಿರಿಯ ಮುಖಂಡ  ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿರ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರು ನಗರದ ಕೊಡಿಯಾಲದದಬೈಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

79 ವರ್ಷದ ಫರ್ನಾಂಡೀಸ್ ಅವರು ಎದೆನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು  ಈ ಹಿನ್ನೆಲೆಯಲ್ಲಿ ವಾರದ ಹಿಂದೆ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಬಳಿಕ ಮನೆಗೆ ಮರಳಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ಆದರೆ ಎದೆನೋವು ಹೆಚ್ಚಾಗಿದ್ದರಿಂದ  ಜೂನ್ 8 ರಿಂದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡೀಸ್ ಲಾಕ್ ಡೌನ್ ಗಿಂತ  ಘೋಷಣೆಯಾಗುವುದಕ್ಕೂ ಮೊದಲು ನ್ಯೂಡೆಲ್ಲಿಯಲ್ಲಿದ್ದರು,  ಘೋಷಣೆಯಾದಾಗ ಕೊನೆಯ ವಿಮಾನದಲ್ಲಿ ಮಂಗಳೂರಿಗೆ ಮರಳಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

Leave a Reply