NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ದೇಶಕ್ಕಾಗಿ ಹುತಾತ್ಮರಾದ ಅನೇಕರು ಅನಾಮಿಕರಾಗಿಯೇ ಉಳಿದಿದ್ದಾರೆ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವನ್ನು ನಾವು ಹುತಾತ್ಮರ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆ ಅಂಗವಾಗಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿ, ಈ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸಾವಿರಾರು ದೇಶಭಕ್ತರಿಗೆ ಗೌರವ ಅರ್ಪಿಸುತ್ತಿದ್ದೇವೆ. ಇವರಲ್ಲಿ ಬಹಳಷ್ಟು ಹುತಾತ್ಮರು ಅನಾಮಿಕರಾಗಿಯೇ ಉಳಿದಿದ್ದಾರೆ. ಅವರ ನಿಸ್ವಾರ್ಥ ದೇಶಭಕ್ತಿ ನಮಗೆಲ್ಲರಿಗೂ ಆದರ್ಶವಾಗಬೇಕು ಎಂದರು.

ಗಾಂಧೀಜಿ ಅವರು ಯಾವ ಉದ್ದೇಶಕ್ಕಾಗಿ ಹೋರಾಡಿದರೋ, ಆ ಕೋಮುಸೌಹಾರ್ದತೆಯ ಸ್ಥಾಪನೆಯ ಕಾರ್ಯ ಇನ್ನೂ ಅಪೂರ್ಣವಾಗಿಯೇ ಉಳಿದಿದೆ. ಗಾಂಧೀಜಿಯವರ ಚಿಂತನೆಗಳು ಒಂದೊಂದಾಗಿ ನಮ್ಮ ಕಣ್ಣಮುಂದೆಯೇ ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಧರ್ಮಧರ್ಮಗಳ ನಡುವೆ ವೈಮನಸ್ಸು ಹುಟ್ಟಿಸಿ, ಗಲಭೆ ಸೃಷ್ಟಿಸಿ ಅದರ ಮೂಲಕ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ ಎಂದರು.

ಗಾಂಧೀಜಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ್ದರೂ ಅಂತರಂಗದಲ್ಲಿ ಅವರೊಬ್ಬ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚ ಸೂತ್ರಗಳ ಮೇಲೆ ತಮ್ಮ ಜೀವನ ಪಯಣ ನಡೆಸಿದ ಅವರೊಬ್ಬ ಮಹಾನ್ ಸಮಾಜ ಪರಿವರ್ತಕ ಎಂದು ಬಣ್ಣಿಸಿದರು.

ಮಹಾತ್ಮ ಗಾಂಧೀಜಿಯವರು ಯಾರನ್ನು ಶತ್ರುಗಳು ಎಂದು ತಿಳಿದು ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯವರನ್ನು ಹತ್ಯೆ ಮಾಡಲಿಲ್ಲ. ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥುರಾಮ್ ಗೋಡ್ಸೆ ಎಂಬ ದೇಶದ್ರೋಹಿ ಗಾಂಧೀಜಿಯವರನ್ನು ಹತ್ಯೆಮಾಡಿದ್ದ ಎಂಬುದನ್ನು ನಾವು ಮರೆಯಬಾರದು ಎಂದರು.

ಗಾಂಧೀಜಿ ಜೀವನ ಮತ್ತು ಸಾಧನೆ ಹೇಗೆ ನಮಗೆ ಆದರ್ಶಪ್ರಾಯವೋ, ಹಾಗೆಯೇ ಅವರ ಸಾವು ಕೂಡಾ ನಮಗೆ ಪಾಠವಾಗಿದೆ. ಗಾಂಧೀಜಿಯವರು ಕೇವಲ ಸ್ವಾತಂತ್ರ್ಯಕ್ಕಾಗಿ, ಅಸ್ಪೃರ್ಶತೆಯ ನಿವಾರಣೆಗಾಗಿ, ಗ್ರಾಮಗಳ ಅಭಿವೃದ್ದಿಗಾಗಿ ಮಾತ್ರ ಹೋರಾಡಲಿಲ್ಲ, ಅವರು ಬಹುಮುಖ್ಯವಾದ ಕೋಮುಸಾಮರಸ್ಯಕ್ಕಾಗಿ ತನ್ನ ಕೊನೆ ಉಸಿರಿರುವ ತನಕ ಹೋರಾಡಿದರು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ ಸೇರಿ ಹಲವರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...