NEWSದೇಶ-ವಿದೇಶ

ಕೊರೊನಾಗೆ ಸಿಕ್ಕಿತು ಲಸಿಕೆ: ರಷ್ಯಾದಿಂದ ನೋಂದಣಿ, ಪುಟಿನ್ ಪುತ್ರಿ ಮೇಲೂ ಪ್ರಯೋಗ

ಕೊರೊನಾ ಲಸಿಕೆಗೆ ಜಗತ್ತಿನ ಮೊಟ್ಟ ಮೊದಲಿಗೆ ರಷ್ಯಾದಲ್ಲಾಯಿತು ನೋಂದಣಿ

ವಿಜಯಪಥ ಸಮಗ್ರ ಸುದ್ದಿ

ಮಾಸ್ಕೊ: ಜಗತ್ತಿನ ಮೊಟ್ಟ ಮೊದಲ ಕೊರೊನಾ ಲಸಿಕೆ ರಷ್ಯಾದಿಂದ ನೋಂದಣಿಯಾಗಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಪುತ್ರಿಗೂ ಕೊರೊನಾ ಸೋಂಕು ದೃಢಪಟ್ಟಿರುವುದಿಂದ ಆಕೆಗೂ ಲಸಿಕೆ ಪ್ರಯೋಗ ಮಾಡಲಾಗಿದೆ.

ಮೂಲಗಳ ಪ್ರಕಾರ ಮಾಸ್ಕೊದ ಗಮೆಲಿಯಾ ಸಂಶೋಧನಾ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಚಿವಾಲಯದ ಜಂಟಿಯಾಗಿ ಲಸಿಕೆ ಅಭಿವೃದ್ಧಿ ಪಡಿಸಿದೆ. ಈ ಲಸಿಕೆಯನ್ನು ಎರಡು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಮನುಷ್ಯರ ಮೇಲೆ ಪ್ರಯೋಗ ನಡೆಸಲಾಗಿದೆ. ಎರಡು ಮತ್ತು ಮೂರನೇ ಹಂತದ ಪ್ರಯೋಗಗಳಲ್ಲಿ  ಭಾಗಿಯಾದ ಎಲ್ಲಾ 38 ಜನರಲ್ಲಿಯೂ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದನ್ನು ಗಮನಿಸಿರುವುದಾಗಿ ರಷ್ಯಾ ರಕ್ಷಣಾ ಸಚಿವಲಯ ಹೇಳಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ  ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಜೂನ್‌ 18ರಿಂದ ಕ್ಲಿನಿಕಲ್‌ ಟ್ರಯಲ್‌ಗಳನ್ನು (ಮನುಷ್ಯರ ಮೇಲೆ) ಆರಂಭಿಸಲಾಗಿತ್ತು. ಪ್ರಯೋಗಕ್ಕೆ ಒಳಗಾದವರ ಪೈಕಿ ಮೊದಲ ಗುಂಪು ಜುಲೈ 15ರಂದು  ಸಂಶೋಧನಾ ಕೇಂದ್ರಗಳಿಂದ ಬಿಡುಗಡೆಯಾಗಿದ್ದು, ಎರಡನೇ ಗುಂಪು ಜುಲೈ 20ರಂದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಅಂತೆಯೇ ಮುಂದಿನ ದಿನಗಳಲ್ಲಿ ಈ ಲಸಿಕೆಯ ತಯಾರಿಕಾ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲಾಗುವುದು ಎಂದು ರಷ್ಯಾ ಹೇಳಿದೆ.

ಕಳೆದ ವಾರ ಲಸಿಕೆ ತಯಾರಿಕಾ ರೇಸ್ ಕುರಿತಂತೆ ರಷ್ಯಾಗೆ ವಿಶ್ವ ಆರೋಗ್ಯ ಸಂಸ್ಥೆ ಅಧಿಕೃತ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಹೇಳಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇನ್ನು ಈ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೇ ಮಾಹಿತಿ ಹಂಚಿಕೊಂಡಿದ್ದು,  ರಷ್ಯಾದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೋವಿಡ್‌-19 ಲಸಿಕೆ ಜನರ ಬಳಕೆಗೆ ಬಿಡುಗಡೆಯಾಗಲಿದೆ. ರಷ್ಯಾದ ಆರೋಗ್ಯ ಸಚಿವಾಲಯ ಅಗತ್ಯವಿರುವ ಎಲ್ಲಾ ಅನುಮೋದನೆಗಳನ್ನು ನೀಡಿದ್ದು, ಆ ಮೂಲಕ ಜಗತ್ತಿನ ಮೊದಲ ಕೋವಿಡ್‌- 19 ಲಸಿಕೆ ಮಂಗಳವಾರ ಅಧಿಕೃತವಾಗಿ ನೋಂದಣಿಯಾಗಿದೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೊರೊನಾ ವೈರಸ್‌ ಲಸಿಕೆಯನ್ನು ಬಳಕೆಗೆ ನೋಂದಾಯಿಸಲಾಗಿದೆ ಹಾಗೂ ಒಬ್ಬಳು ಮಗಳಿಗೆ ಆಗಲೇ ಲಸಿಕೆ ನೀಡಲಾಗಿದೆ ಎಂದು ಪುಟಿನ್‌ ವಿವರಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ