ಬೆಂಗಳೂರು: ಇಂದು ಸಂಜೆವೇಳಗೆ ರಾಜ್ಯದಲ್ಲಿ ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಇನ್ನು ಸಂಜೆ ಹೊಸದಾಗಿ14 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಬೆಳಗ್ಗೆ 8 ಮಂದಿ ಸೋಂಕಿಗೆ ಒಳಗಾಗಿದ್ದರು. ಈ ಮೂಲಕ ಸಂಜೆ ವೇಳಗೆ ಒಟ್ಟು 22 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ.
aವುಗಳಲ್ಲಿ 29 ಜನರು ಮೃತಪಟ್ಟಿದ್ದು, 331 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ದಾವಣಗೆರೆಯಲ್ಲಿ ಇಂದು ಸಂಜೆವೇಳೆಗೆ 12 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಅದರಂತೆ ಬೆಂಗಳೂರಿನಲ್ಲಿ ಮೂರು, ಬಾಗಲಕೋಟೆ 2, ಹಾವೇರಿ, ಧಾರವಾಡ, ಬಳ್ಳಾರಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಬಟ್ಕಳದಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 673 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 331 ಮಂದಿ ಗುಣಮುಖರಾಗಿದ್ದಾರೆ. ಇನ್ನು 313 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 29 ಮಂದಿ ಮೃತಪಟ್ಟಿದ್ದಾರೆ. ಅದರಲ್ಲಿ ದಾವಣಗೆರೆ ಮತ್ತು ವಿಜಯಪುರದಲ್ಲಿ ಇಂದು ಒಬ್ಬೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ಪ್ರಕರಣ ವರದಿಯಾಗಿಲ್ಲ.
ದೇಶದಲ್ಲಿ 46,490 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 46,490 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,573 ಮಂದಿ ಮೃತಪಟ್ಟಿದ್ದಾರೆ. 12,849 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 36,47,615 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,52,444 ಜನರು ಮೃತಪಟ್ಟಿದ್ದಾರೆ. 12,00,680 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.