ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಹೊತ್ತು ತರಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ.
ಇನ್ನು ರಾಜ್ಯವನ್ನು ಕಾಡುತ್ತಿರುವ ಕೊರೊನಾ ಸಾಂಕ್ರಾಮಿಕದಿಂದ ಮುಕ್ತಿ ದೊರೆತು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ. ಪರಿಸರ ಸ್ನೇಹಿಯಾಗಿ, ಸುರಕ್ಷಿತವಾಗಿ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನು ಆಚರಿಸೋಣ. ಸರ್ವರಿಗೂ ದೀಪಾವಳಿಯ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.