NEWSನಮ್ಮಜಿಲ್ಲೆರಾಜಕೀಯ

ಜೆಡಿಎಸ್‌ನ ರುಕ್ಮಿಣಿಗೆ ಒಲಿದ ಮೈಸೂರು ಪಾಲಿಕೆ ಮೇಯರ್‌ ಪಟ್ಟ

ಪ್ರಥಮ ಚುಂಬನಂ ದಂತ ಭಗ್ನ ಎಂಬಂತಾದ ಬಿಜೆಪಿ l ಜೆಡಿಎಸ್‌ಗೆ ಸಾಥ್‌ ನೀಡಿದ ಕಾಂಗ್ರೆಸ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮತ್ತು ಉಪ ಮೇಯರ್ ಆಗಿ ಕಾಂಗ್ರೆಸ್‌ನ ಅನ್ವರ್ ಬೇಗ್‌ ಆಯ್ಕೆಯಾಗಿದ್ದಾರೆ.

ಇಂದು ಪಾಲಿಕೆಯ ಕೌನ್ಸಿಲ್‌ ಹಾಲ್‌ನಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ರುಕ್ಮಿಣಿ ಅವರ ಪರವಾಗಿ ಕಾಂಗ್ರೆಸ್‌ ಸದಸ್ಯರು ಕೈ ಎತ್ತಿದ್ದರಿಂದ ರುಕ್ಮಿಣಿ ಅವರು ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಅಧಿಕೃತ ಘೋಷಣೆ ಮಾಡಿದರು.

ಮೂರೂ ಪಕ್ಷಗಳು ಚುನಾವಣೆಯಲ್ಲಿ ಸ್ವತಂತ್ರವಾಗಿ ಕಣಕ್ಕಿಳಿದಿದ್ದವು. ಹೀಗಾಗಿ ಈ ಚುನಾವಣೆ ಮೂರು ಪಕ್ಷಗಳ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತ್ತು. ಆದರೆ ಅಂತಿಮವಾಗಿ ಬಿಜೆಪಿಯನ್ನು ಬಗ್ಗು ಬಡಿಯುವ ಉದ್ದೇಶದಿಂದ ಕಾಂಗ್ರೆಸ್‌ ಸದಸ್ಯರು ಜೆಡಿಎಸ್‌ ಮೇಯರ್‌ ಅಭ್ಯರ್ಥಿ ಪರ ಕೈ ಎತ್ತುವ ಮೂಲಕ ತಮ್ಮ ಓಟು ಹಾಕಿದರು. ಹೀಗಾಗಿ ಕೊನೆ ಕ್ಷಣದಲ್ಲಿ ಜೆಡಿಎಸ್‌ ಮೇಯರ್‌ ಪಟ್ಟ ಅಲಂಕರಿಸುವ ಮೂಲಕ ವಿಜಯದ ನಗೆ ಬೀರಿ ಹಿಗ್ಗಿದೆ.

ಯಾವ ಪಕ್ಷಕ್ಕೂ ಬಹುಮತವಿಲ್ಲದ ಕಾರಣ ಕಾಂಗ್ರೆಸ್ ಮತ್ತು ಬಿಜೆಪಿಗೆ ಜೆಡಿಎಸ್ ದೋಸ್ತಿ ಅವಶ್ಯಕವಾಗಿತ್ತು. ಹೀಗಾಗಿ ಮೇಯರ್‌ ಚುನಾವಣೆಯಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ ಎಂದು ಭಾವಿಸಲಾಗಿತ್ತು. ಆದರೆ ಕೊನೆಯವರೆಗೂ ಮೈತ್ರಿಯನ್ನು ಬಿಟ್ಟುಕೊಡದ ಜೆಡಿಎಸ್ ತಾನೇ ಗೆದ್ದು ಎಲ್ಲರಲ್ಲೂ ಅಚ್ಚರಿಯನ್ನು ಮೂಡಿಸಿತು.

ಚುನಾವಣಾ ಅಧಿಕಾರಿಯಾಗಿ ಜಿ.ಸಿ.ಪ್ರಕಾಶ್ ಮತ್ತು ಆಯುಕ್ತೆ ಶಿಲ್ಪನಾಗ್ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಿತು. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್‌.ರಾಮದಾಸ್, ಎಲ್. ನಾಗೇಂದ್ರ, ಮರಿತಿಬ್ಬೇಗೌಡ ಮತ್ತು ಕೆ.ಟಿ.ಶ್ರೀಕಂತೇಗೌಡ ಅವರು ಚುನಾವಣೆಯಲ್ಲಿ ಭಾಗಿಯಾಗಿದ್ದರು.

ಚುನಾವಣೆ ಪ್ರಕ್ರಿಯೆ
ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮೈಸೂರು ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕೆ ಪ್ರತ್ಯೇಕ ನಾಮಪತ್ರ ಸಲ್ಲಿಸಿದವು. ಮೇಯರ್ ಸ್ಥಾನಕ್ಕೆ ಬಿಜೆಪಿಯ ಸುನಂದ ಪಾಲನೇತ್ರ ನಾಮಪತ್ರ ಸಲ್ಲಿಸಿದರೆ, ಸಾತ್ವಿಕ್ ಸಂದೇಶ್‌ಸ್ವಾಮಿ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಿಂದ ಮೇಯರ್ ಸ್ಥಾನಕ್ಕೆ ಶಾಂತಕುಮಾರಿ ಮತ್ತು ಉಪ ಮೇಯರ್ ಸ್ಥಾನಕ್ಕೆ ಅನ್ವರ್ ಬೇಗ್ ಅವರು ನಾಮಪತ್ರ ಸಲ್ಲಿಸಿದ್ದರು.

ರುಕ್ಮಿಣಿ ಮಾದೇಗೌಡ ಜೆಡಿಎಸ್ ನಿಂದ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಆದರೆ ಜೆಡಿಎಸ್‌ನಿಂದ ಉಪಮೇಯರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳು ಪ್ರತ್ಯೇಕವಾಗಿ ಚುನಾವಣಾ ಕಣಕ್ಕೆ ಇಳಿದಿದ್ದರು. ಈ ನಡುವೆ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಮೇಯರ್‌ ಸ್ಥಾನ ಅಲಂಕರಿಸಲು ಬಿಜೆಪಿ ಪ್ರಯತ್ನ ನಡೆಸಿತ್ತು. ಆದರೆ ಅದರ ಪ್ರಯತ್ನ ವಿಫಲವಾಯಿತು. ಹೀಗಾಗಿ ಮೈಸೂರಿನ ಮೊದಲ ಪ್ರಜೆಯಾಗಬೇಕು ಎಂದು ಮೂರು ಪಕ್ಷಗಳ ನಡುವೆ ಜಿದ್ದಾಜಿದ್ದಿನ ಹೋರಾಟ ಪ್ರಾರಂಭವಾಯಿತು.

ಜೆಡಿಎಸ್ ಮೇಯರ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಅವರನ್ನು ಕಾಂಗ್ರೆಸ್ ಸದಸ್ಯರು ಅಂತಿಮಾವಿ ಬೆಂಬಲಿಸಿದ್ದರಿಂದ ಮೇಯರ್ ಪಟ್ಟ ಜೆಡಿಎಸ್ ಪಾಲಾಯಿತು. ಈ ಮೂಲಕ ಕೊನೆಯ ಕ್ಷಣದಲ್ಲಿ, ಕೈ ಸದಸ್ಯರು ಮೇಯರ್ ಚುನಾವಣೆಗೆ ಒಂದು ತಿರುವನ್ನು ನೀಡಿದರು. ಹೀಗಾಗಿ ಬಿಜೆಪಿಯ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾದವು. ಬಿಜೆಪಿ ಇದೇ ಮೊದಲ ಬಾರಿಗೆ ಮೈಸೂರು ಮೇಯರ್ ಪಕ್ಷ ಅಲಂಕರಿಸಲು ತುದಿಗಾಲಿನಲ್ಲಿ ನಿಂತು ಕನಸು ಕಂಡಿದ್ದು ನುಚ್ಚು ನೂರಾಯಿತು.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...