ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಗೆ ಇಳಿದಿದ್ದು, ಇದರಿಂದ ಬೆಂಗಳೂರು ನಗರ ಸೇರಿ ರಾಜ್ಯಾದ್ಯಂತ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗಿದೆ.
ಇದೇ ಬೇಡಿಕೆ ಮುಂದಿಟ್ಟು ನಿನ್ನೆ ಬೆಂಗಳೂರಿನಲ್ಲಿ ನೌಕರರು ಪ್ರತಿಭಟನೆ ನಡೆಸಿದಾಗ ಆ ನೌಕರರನ್ನು ಬಂಧಿಸಿರುವುದು ನೌಕರರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಇಂದು ಏಕಾಏಕಿ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆಗೆ ಇಳಿದಿದ್ದಾರೆ. ಇದರ ಬಿಸಿ ಸರ್ಕಾರಕ್ಕೆ ಬಹಳ ಜೋರಾಗಿಯೇ ತಟ್ಟಿದ್ದು, ಪ್ರತಿಭಟನ ನಿರತ ನೌಕರರ ಪ್ರಮುಖರೊಂದಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿಯವರು ಮಧ್ಯಾಹ್ನ ವಿಕಾಸ ಸೌಧದಲ್ಲಿ ಸಭೆ ಕರೆದಿದ್ದಾರೆ.
ಜತೆಗೆ ನೌಕರರು ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗಿ ಈ ಕೋವಿಡ್ ಸಮಯದಲ್ಲಿ ಇಂಥ ಕೆಲಸಕ್ಕೆ ನೀವು ಕೈಹಾಕಿ ನಾಡಿನ ಜನರಿಗೆ ಹೊರೆ ಮಾಡಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ.
ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಮಾತನಾಡಿದ್ದು, ಶಾಂತಿಯುತವಾಗಿ ನಿಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದೆ ಬನ್ನಿ. ಮುಷ್ಕರ ಕೈ ಬಿಡಿ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ವಿಕಾಸಸೌಧದಲ್ಲಿ ನಡೆಯುವ ಸಭೆಯಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದನ್ನು ನೋಡಿಕೊಂಡು ಸಾರಿಗೆ ನೌಕರರು ಮುಂದಿನ ನಡೆ ಅನುಸರಿಸುವುದಾಗಿ ಹೇಳುತ್ತಿದ್ದಾರೆ.
Ellakku covid kaarana alva mane al nanmaklu