Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡಿದ್ದ ಸಚಿವ ಶಂಕರ್ ಮನವೊಲಿಕೆ ಸಫಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡಿದ್ದ ಆರ್ ಶಂಕರ್ ಅವರಿಗೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡುವ ಭರವಸೆ ಕೊಟ್ಟು ಮನವೊಲಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಫಲರಾಗಿದ್ದಾರೆ ಎನ್ನಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶುಕ್ರವಾರ ಮಧ್ಯಾಹ್ನದಿಂದ ಖಾತೆ ಬದಲಾವಣೆಗೆ ಪಟ್ಟು ಹಿಡಿದು ಕುಳಿತಿದ್ದ ಶಂಕರ್ ಅವರನ್ನುಸಿಎಂ ಅಧಿಕೃತ ನಿವಾಸ ಕಾವೇರಿಗೆ ಕರೆಸಿಕೊಂಡ ಯಡಿಯೂರಪ್ಪ ಮಾತನಾಡಿ ಮನವೊಲಿಸಿದ್ದಾರೆ. ಈ ವೇಳೆ ಹಾವೇ ರಿ ಜಿಲ್ಲಾ ಉಸ್ತುವಾರಿ ಸ್ಥಾನ ಕೊಡುತ್ತೇವೆ ಎಂಬ ಭರವಸೆ ನೀಡಿದ್ದರಿಂದ ಅಂತಿಮವಾಗಿ ಸಮಾಧಾನಗೊಂಡು ಸಿಎಂ ಮನೆಯಿಂದ ಶಂಕರ್ ತೆರಳಿದರು ಎನ್ನಲಾಗಿದೆ.

ಸಿಎಂ ಭೇಟಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಶಂಕರ್, ಹಾವೇರಿ ಜಿಲ್ಲಾ ಉಸ್ತುವಾರಿ ಕೊಡೋದಾಗಿ ಭರವಸೆ ಕೂಡ ನೀಡಿದ್ದಾರೆ. ಹೀಗಾಗಿ ಸದ್ಯಕ್ಕೆ ನನಗೆ ಯಾವುದೇ ಅಸಮಾಧಾನ ಇಲ್ಲ. ಈಗ ಕೊಟ್ಟ ತೋಟಗಾರಿಕೆ, ರೇಷ್ಮೆ ಖಾತೆಯಲ್ಲೇ ಸಂತೋಷದಿಂದ ಮುಂದುವರಿಯುತ್ತೇನೆ ಎಂದು ತಿಳಿಸಿದ್ದಾರೆ.

ಈ ಮೊದಲು ಪೌರಾಡಳಿತ ಖಾತೆ ಬದಲಾವಣೆ ಮಾಡಿದ್ದಕ್ಕೆ ಬೇಸರ ಆಗಿತ್ತು. ಅದಕ್ಕಾಗಿ ಅದೇ ಖಾತೆ ಬೇಕು ಎಂದು ಸಿಎಂ ಬಳಿ ಇಷ್ಟೊತ್ತು ಪಟ್ಟು ಹಿಡಿದಿದ್ದೆ. ಆದರೆ ಅಂತಿಮವಾಗಿ ಸಿಎಂ ಅನಿವಾರ್ಯ ಕಾರಣಗಳಿಂದ ಮತ್ತೆ ಖಾತೆ ಬದಲಾವಣೆ ಮಾಡಲು ಆಗುವುದಿಲ್ಲ, ಇವಾಗ ಕೊಟ್ಟಿರುವ ತೋಟಗಾರಿಕೆ, ರೇಷ್ಮೆ ಖಾತೆಯಲ್ಲೆ ಮುಂದುವರಿಯಿರಿ ಎಂದು ತಿಳಿಸಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಬೇರೆ ಖಾತೆ ಕೊಡುವ ಬಗ್ಗೆ ಭರವಸೆ ನೀಡಿದ್ದಾರೆ. ಹೀಗಾಗಿ ಸಿಎಂ ಮಾತಿಗೆ ಒಪ್ಪಿ ಬಂದಿದ್ದೇನೆ ಎಂದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ