Vijayapatha – ವಿಜಯಪಥ
Friday, November 1, 2024
NEWSಸಂಸ್ಕೃತಿ

ಈ ಬಾರಿ ಪಟಾಕಿ ನಿಷೇಧ: ಸರಳ ದೀಪಾವಳಿ ಆಚರಣೆಗೆ ಸಚಿವ ಸುಧಾಕರ್ ಮನವಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಬಾರಿ ಸರಳ ದೀಪಾವಳಿ ಆಚರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಸಾಯನಿಕಯುಕ್ತ ಪಟಾಕಿ ನಿಷೇಧಿಸಿ ಈ ಬಾರಿ ಸರಳ ದೀಪಾವಳಿ ಮಾಡಬೇಕು. ಈ ವರ್ಷ ಯಾರೂ ಪಟಾಕಿ ಸಿಡಿಸಬಾರದೆಂದು ಮುಖ್ಯಮಂತ್ರಿ ತೀರ್ಮಾನಿಸಿದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡುವೆ ವೇಳೆ ಸುಧಾಕರ್‌ ಹೇಳಿದರು.

ಆರೋಗ್ಯದ ದೃಷ್ಟಿಯಿಂದ ಪಟಾಕಿ ನಿಷೇಧ ಮಾಡಲಾಗಿದೆ.ಈ ಸಂಬಂಧ ಆರೋಗ್ಯ ಇಲಾಖೆಯ ತಾಂತ್ರಿಕ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.ಈ ವರದಿಯ‌ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸಲಾಗಿದೆ ಎಂದರು.

ಕದ್ದು ಮುಚ್ಚಿ ಪಟಾಕಿ ಸಿಡಿಸುವವರ ಮೇಲೂ ನಿಗಾ ವಹಿಸಲಾಗುವುದು. ಕದ್ದು ಮುಚ್ಚಿ ಪಟಾಕಿ ಸಿಡಿಸುವುದನ್ನು ತಡೆಯಲು ನಾಳೆ ಚರ್ಚಿಸಿ ನಿಯಮ ರೂಪಿಸಲಾಗುವುದು. ಪಟಾಕಿ ನಿಷೇಧಕ್ಕೆ ಜನರು ಸಹಕರಿಸಬೇಕು ಎಂದು ತಿಳಿಸಿದರು.

‘ಉಪಚುನಾವಣೆ ನಡೆದ ಎರಡು ಕ್ಷೇತ್ರದಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು ಅಂತ ತಜ್ಞರ ಸಮಿತಿ ವರದಿ ನೀಡಿದೆ. ಅದೇ ರೀತಿ ಗ್ರಾಮ ಪಂಚಾಯಿತಿ ಚುನಾವಣೆ ಸಹ ಮುಂದೂಡಲು ವರದಿ ನೀಡಿದ್ದಾರೆ ಎಂದರು..

ಪಟಾಕಿಯಿಂದ ಶ್ವಾಸಕೋಶದ ಸಮಸ್ಯೆ ಸೃಷ್ಟಿಯಾಗುತ್ತದೆ. ಈ ಕಾರಣದಿಂದ‌ ತಜ್ಞರು ಪಟಾಕಿ ಬೇಡ ಎಂದಿದ್ದಾರೆ. ಹೀಗಾಗಿ ಈ ಬಾರಿ ಸರಳ ದೀಪಾವಳಿ ಆಚರಿಸಬೇಕಿದೆ. ದೀಪ ಹಚ್ಚುವ ಮೂಲಕ ಹಬ್ಬ ಆಚರಣೆ ಮಾಡೋಣ ಎಂದು ಹೇಳಿದರು.

ಮತ್ತೆ ಶೇ.5 ರಷ್ಟು ಮಂದಿಗೆ ಕೊರೊನಾ ಮರುಕಳಿಸಿದೆ ಎಂಬ ಅಂಕಿ-ಅಂಶವೂ ಬೆಳಕಿಗೆ ಬಂದಿದೆ. ಹೀಗಾಗಿ ಒಮ್ಮೆ ಕೊರೊನಾ ಬಂದರೆ ಮತ್ತೊಮ್ಮೆ ಬರುವುದಿಲ್ಲ ಎಂಬ ತಪ್ಪು ಗ್ರಹಿಕೆ ಬೇಡ. ಲಸಿಕೆ ಬರುವ ತನಕ ಎಲ್ಲರೂ ಮುಂಜಾಗ್ರತೆ ವಹಿಸಲೇಬೇಕು ಎಂದು ಸಲಹೆ ನೀಡಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ