ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು ಗ್ರಾಮಾಂತರ: “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಹೊಸಹಳ್ಳಿ ಗ್ರಾಮದೇವತೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿಯಲ್ಲಿ ಇದಕ್ಕೂ ಮುನ್ನಾಸಚಿವರು ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಹಾಗೂ ಗ್ರಾಮದೇವತೆ ಮಾರಮ್ಮ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ಗ್ರಾಮದ ವಿಕಲಚೇತನರ ಮನೆಗೆ ಭೇಟಿ ನೀಡಿ, ವಿವಿಧ ಸಾಧನ ಸಲಕರಣೆ ವಿತರಿಸಿದರು.