NEWSನಮ್ಮಜಿಲ್ಲೆ

ಜಲಾವೃತಗೊಂಡ ಅಪಾರ್ಟ್ಮೆಟ್‌ಗೆ ಶಾಸಕ ವಿಶ್ವನಾಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಭೇಟಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಯಲಹಂಕ ವಲಯ ಕೆಂಪೇಗೌಡ ವಾರ್ಡ್ ವ್ಯಾಪ್ತಿಯ ಯಲಹಂಕ ಕೆರೆ ತುಂಬಿ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡಿರುವ ಸ್ಥಳಕ್ಕೆ ಸ್ಥಳೀಯ ಶಾಸಕ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾನುವಾರ ರಾತ್ರಿ ಎರಡು ಗಂಟೆ ಸಮಯದಲ್ಲಿ 130 ಮಿ.ಮೀಗೂ ಹೆಚ್ಚು ಮಳೆಯಾದ ಪರಿಣಾಮ ಯಲಹಂಕ ಕೆರೆ ತುಂಬಿ ಕೆರೆಯ ಕೋಡಿ ಬಿದ್ದು, ರಾಜಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಸುಮಾರು 4 ಅಡಿಯಷ್ಟು ನೀರು ನಿಂತು ಜಲಾವೃತಗೊಂಡಿದೆ. ಅಪಾರ್ಟ್ಮೆಂಟ್ ನಲ್ಲಿ 604 ಪ್ಲಾಟ್ ಗಳಿದ್ದು, 1,600 ನಿವಾಸಿಗಳು ವಾಸಿಸುತ್ತಿದ್ದಾರೆ.

ಮೆನೆಯಲ್ಲಿರುವವರಿಗೆ ಹಾಲು, ಬಿಸ್ಕೆಟ್, ಕ್ಯಾಂಡಲ್, ಬ್ರೆಡ್, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. 18 ಎನ್.ಡಿ.ಆರ್.ಎಫ್ ತಂಡಗಳು ಹಾಗೂ ಅಗ್ನಿ ಶಾಮಕ ತಂಡಗಳು ದೋಣಿಗಳು ಹಾಗೂ ಟ್ರ್ಯಾಕ್ಟರ್ ಮೂಲಕ ನಿವಾಸಿಗಳನ್ನು ಮನೆಯಿಂದ ಹೊರಗೆ ಕರೆತರುವ ಹಾಗೂ ಒಳಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ. ಯಾರಿಗೂ ಯಾವುದೇ ಸಮಸ್ಯೆ ಆಗುರಿವುದಿಲ್ಲ. ಪಾಲಿಕೆಯ ಕಂದಾಯ ಅಧಿಕಾರಿಗಳ ತಂಡವು ನಿವಾಸಿಗಳ ಮನೆಗೆ ತೆರಳಿ ಏನೇನು ಸಮಸ್ಯೆಯಾಗಿದೆ ಎಂಬ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಸ್ಥಳಕ್ಕೆ ಪಾಲಿಕೆಯ ವೈದ್ಯಕೀಯ ತಂಡದ ವ್ಯವಸ್ಥೆ ಮಾಡಲಾಗಿದ್ದು, 8 ವೈದ್ಯರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ದಿನದ 24 ಗಂಟೆಯೂ ಒಬ್ಬ ವೈದ್ಯ, ಸಿಬ್ಬಂದಿ ಹಾಗೂ ಬೇಸಿಕ್ ಲೈಫ್ ಸಪೋರ್ಟ್ ಆಂಬುಲೆನ್ಸ್ ನ ವ್ಯವಸ್ಥೆ ಮಾಡಲಾಗಿದ್ದು, ಅಪಾರ್ಟ್ಮೆಂಟ್ ನಲ್ಲಿರುವ ನಿವಾಸಿಗಳಿಗೆ ಏನಾದರು ಸಮಸ್ಯೆಯಾದರೆ ವೈದ್ಯಕೀಯ ತಂಡ ಕೂಡಲೆ ಸ್ಪಂದಿಸಲಿದೆ. ಯಾರಾದರು ಆಸ್ಪತ್ರೆಗೆ ತೆರಳುವ ಅವಶ್ಯಕತೆ ಇದ್ದರೆ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗುವುದು.

ಮುಖ್ಯ ಆಯುಕ್ತ ಗೌರವ್ ಗುಪ್ತ ಮಾತನಾಡಿ, ಯಲಹಂಕ ವಲಯ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ 130 ಮಿ.ಮೀ ಗೂ ಹೆಚ್ಚು ಮಳೆಯಾದ ಪರಿಣಾಮ ಕೆರೆ ತುಂಬಿ ರಾಜಕಾಲುವೆಯಲ್ಲಿ ಹೆಚ್ಚಿನ ನೀರು ಹರಿದಿರುವ ಅಪಾರ್ಟ್ಮೆಂಟ್ ನಲ್ಲಿ ಜಲಾವೃತಗೊಂಡಿದೆ. ಪಾಲಿಕೆ ವತಿಯಿಂದ ಅಪಾರ್ಟ್ಮೆಂಟ್ ನಿವಾಸಿಗಳಿಗೆ ತಿಂಡಿ, ಹಾಲು ವಿತರಣೆ ಕೆಲಸ ಮಾಡಲಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಅಪಾರ್ಟ್‌ಮೆಂಟ್ ನಲ್ಲಿ ನಿಂತಿರುವ ನೀರನ್ನು ರಾಜಕಾಲುವೆಯ ಮೂಲಕ ಹರಿದು ಹೋಗುವ ವ್ಯವಸ್ಥೆ ಮಾಡಲಾಗುತ್ತಿದೆ. ಯಲಹಂಕ ಕೆರೆಯಿಂದ ಜಕ್ಕೂರು ಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯು 8 ಅಡಿ ಅಗಲವಿದ್ದು, ಅದನ್ನು 33 ಅಡಿ ಅಗಲ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಸಂಬಂಧ ಸೂಕ್ತ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಪಾಸಣೆ ವೇಳೆ ಮಾನ್ಯ ಶಾಸಕರು ಎಸ್.ಆರ್.ವಿಶ್ವನಾಥ್, ವೇಳೆ ಜಂಟಿ ಆಯುಕ್ತರು ಪೂರ್ಣಿಮಾ, ಮುಖ್ಯ ಇಂಜಿನಿಯರ್ ರಂಗನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...