NEWSನಮ್ಮರಾಜ್ಯರಾಜಕೀಯ

ಕೊರೊನಾಕ್ಕೆ ಬಲಿಯಾದ ರಾಜ್ಯಸಭಾ ಸದಸ್ಯ ಆಶೋಕ್‌ ಗಸ್ತಿ-ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ವಿಜಯಪಥ ಸಮಗ್ರ ಸುದ್ದಿ

ಪೋತಗಲ್: ಕೊರೊನಾ ಸೋಂಕಿಗೆ ತುತ್ತಾಗಿ ಗುರುವಾರ ರಾತ್ರಿ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ರಾಯಚೂರಿನಲ್ಲಿ ನೆರವೇರಿಸಲಾಯಿತು.

ಅಶೋಕ್ ಗಸ್ತಿ ಅವರ ಹುಟ್ಟೂರಾದ ರಾಯಚೂರು ಜಿಲ್ಲೆಯ ಪೋತಗಲ್‌ಗೆ ಶುಕ್ರವಾರ ಗಸ್ತಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ತೆಗೆದುಕೊಂಡು ಹೋಗಲಾಗಿಯಿತು. ಪೋತಗಲ್ ನಲ್ಲಿ ಕೊರೊನಾದಿಂದ ಮೃತರಾದವರಿಗೆ ಮೀಸಲಿರಿಸಿದ ರುದ್ರಭೂಮಿಯಲ್ಲಿ ಗಸ್ತಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಇದಕ್ಕೂ ಮೊದಲು ಗಸ್ತಿ ಅವರು ಕೊರೊನಾದಿಂದಾಗಿ ಮೃತಪಟ್ಟ ಹಿನ್ನೆಲೆ ಕೊರೊನಾ ನಿಯಮದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಅದರಂತೆ ಬೆಂಗಳೂರಿನಿಂದ ಗಸ್ತಿ ಅವರ ಪಾರ್ಥಿವ ಶರೀರ ರಾಯಚೂರಿನ ಅವರ ನಿವಾಸಕ್ಕೆ ಆಗಮಿಸಿತು. ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಅಂಬುಲೆನ್ಸ್‌ ಮೂಲಕವೇ ಪೋತಗಲ್‌ನ ಸ್ಮಶಾನಕ್ಕೆ ರವಾನೆ ಮಾಡಲಾಯಿತು. ಕೊರೊನಾ ಮಾರ್ಗಸೂಚಿ ಹಿನ್ನೆಲೆಯಲ್ಲಿ ಬೆಂಬಲಿಗರಿಗೆ ದೂರದಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಸೆಪ್ಟೆಂಬರ್ 2ರಂದು ಗಸ್ತಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಗುರುವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...