NEWSರಾಜಕೀಯ

ಕೊರೊನಾ ಪಾಸಿಟಿವ್‌: ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇತ್ತೀಚಿಗಷ್ಟೇ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್​ ಗಸ್ತಿ(55) ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಮಾಧ್ಯಮಗಳು ಗಸ್ತಿ ಅವರು ಕೊರೋನಾದಿಂದ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದ್ದವು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಣಿಪಾಲ್ ಆಸ್ಪತ್ರೆ, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಶೋಕ್ ಗಸ್ತಿ ಅವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.

ಸೆಪ್ಟೆಂಬರ್ 2ರಂದು ಗಸ್ತಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ಅವರು ನಗರದ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಶೋಕ್ ಗಸ್ತಿ ಅವರು ಸವಿತಾ ಸಮಾಜಕ್ಕೆ ಸೇರಿದ್ದವರು. ಆರ್ ಎಸ್ಎಸ್‍ನ ಶಿಸ್ತಿನ ಸಿಪಾಯಿ ಆಗಿದ್ದ ಅವರನ್ನು ನಾಲ್ಕು ತಿಂಗಳ ಹಿಂದಷ್ಟೇ ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ.

ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 8ರಂದು ನಡೆಯಬೇಕಿದ್ದ ಚುನಾವಣೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಾಗಿದ್ದ ಗಸ್ತಿ ಅವರನ್ನು ಕಣಕ್ಕಿಳಿಸಿತ್ತು ಮತ್ತು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...