Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಸಚಿವ ಸಂಪುಟ ವಿಸ್ತರಣೆ ವಿಳಂಬಕ್ಕೆ ಎಂಟಿಬಿ ನಾಗರಾಜ್‌, ಶಕರ್‌ ಅಸಮಾಧಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಲಸಿಗ ಬಿಜೆಪಿ ಎಂಎಲ್‌ಎಗಳಾದ ಎಂಟಿಬಿ ನಾಗರಾಜ್‌ ಮತ್ತು ಶಂಕರ್‌ ಅಸಮಾಧಾನವನ್ನು ಹೊರಹಾಕಿದ್ದಾರೆ.

ಪ್ರತಿಬಾರಿಯೂ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಹೇಳುತ್ತಾರೆ ಮತ್ತೆ ಮುಂದೂಡುತ್ತಿದ್ದಾರೆ. ಇದರಿಂದ ನಮಗೆ ತುಂವ ಬೇಸವಾಗಿದೆ ಎಂದು ಇಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ಇಬ್ಬರು ನಾಯಕರು ಬೇಸರ ವ್ಯಕ್ತಪಡಿಸಿದರು.

ನಾವು ಹೋದಾಗೆಲ್ಲ ಹೇಳುತ್ತಾರೆ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಆದರೆ ಅದು ವಿಳಂಬವಾಗುತ್ತಿದೆ. ಇದರಿಂದ ನಮಗೆ ಬೇಜಾರಾಗಿದೆ. ನಾಯಕರು ಮನಸ್ಸು ಮಾಡಿದರೆ ಇಂದೇ ವಿಸ್ತರಣೆ ಮಾಡಬಹುದು ಎಂದು ಶಕರ್‌ ಹೇಳಿದರು.

ಇನ್ನು 17ಜರ ಪೈಕಿ ನಾಲ್ವರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಳ್ಳಲು ವಿಳಂಬ ಮಾಡುತ್ತಿದ್ದು, ಇದರಿಂದ ನಮ್ಮ ಸಮುದಾಯದವರ ಅಭಿವೃದ್ಧಿ ಬಗ್ಗೆ ನಾವು ಶ್ರಮಿಸಲಾಗುತ್ತಿಲ್ಲ ಎಂಬ ನೋವು ನಮ್ಮನ್ನು ಬಾಧಿಸುತ್ತಿದೆ ಎಂದು ಎಂಟಿಬಿ ನಾಗರಾಜ್‌ ಕೂಡ ಹೇಳಿದ್ದು, ಶೀಘ್ರದಲ್ಲೇ ನಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...