ಅಬ್ಬರಿಸಿ ಬೊಬ್ಬಿರಿಯಲಿದೆ ನಿಸರ್ಗ ಚಂಡಮಾರುತ
ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ಹಲವು ಬಾಗದಲ್ಲಿ ಹೆಚ್ಚಾಗುತ್ತಿದೆ ಮಳೆ ಗಾಳಿಯ ಆರ್ಭಟ

ಮುಂಬೈ: ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ನಿಸರ್ಗ ಚಂಡಮಾರುತ ಇನ್ನು ಕೆಲವೇ ಗಂಟೆಗಳಲ್ಲಿ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ 132 ವರ್ಷದ ಬಳಿಕ ಸೈಕ್ಲೋನ್ ಮರುಕಳಿಸಿದ್ದು, ಗಂಟೆಗೆ 120 ಕಿಮೀ ವೇಗದಲ್ಲಿ ಅಪ್ಪಳಿಸಲಿದೆ ಎಂದು ಹೇಳಲಾಗಿದೆ. ಇದರಿಂದ ಮುಂಬೈ ನಗರ ತತ್ತರಿಸಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿರಿ: ಮುಂದಿನ ಮೂರುದಿನಗಳಲ್ಲಿ ಅಪ್ಪಳಿಸಲಿದೆ ಚಂಡ ಮಾರುತ
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಇಂದು ಚಂಡಮಾರುತ ತೀವ್ರತೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಸುಮಾರು 15 ಸಾವಿರ ಮಂದಿಯನ್ನು ವಾಪಸ್ ಕರೆಸಿಕೊಳ್ಳಲಾಗಿದೆ.
ಸುಮುದ್ರದಲ್ಲಿ ಅಲೆಗಳ ತೀವ್ರತೆ ಹೆಚ್ಚಾಗುತ್ತಿದ್ದು, ಗಾಳಿಯ ವೇಗವು ಹೆಚ್ಚಾಗುತ್ತಿದೆ. ಈ ಬಗ್ಗೆ ಮುಂಜಾಗ್ರತ ಕ್ರಮವಾಗಿ ಈಗಾಗಲೇ ರಾಜ್ಯ ಸರ್ಕಾರಗಳು ಸಿದ್ಧತೆ ಮಾಡಿಕೊಂಡಿವೆ. ಜತೆಗೆ ಮುಂಬೈನಿಂದ ಕೊರೊನಾ ಸೋಂಕಿತ ಸುಮಾರು ಒಂದು ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗುತ್ತಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಮುಂಬೈ ಮತ್ತು ಅಲಿಭಾಗ್‌ನಲ್ಲಿ ಚಂಡಮಾರುತ ಬೊಬ್ಬಿರಿಯುತ್ತಿದ್ದು, ಇದರ ಭಾಗವಾಗಿ ಮಲ್ಪೆಯಲ್ಲಿಯೂ ಇದರ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಮುಂದಿನ ನಾಲ್ಕು ದಿನಗಳವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಉಡುಪಿ ಜಿಲ್ಲಾಡಳಿತ ಸಲಹೆ ನೀಡಿದೆ.
ಇನ್ನು ಮಂಗಳೂರು ಕಡಲ ತೀರಗಳಲ್ಲೂ ಚಂಡಮಾರುತ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಇಲ್ಲಿನ ಮೀನುಗಾರರಿಗೂ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಅಲ್ಲದೆ ಸಮುದ್ರ ತೀರದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಯಾವುದೇ ತೊಂದರೆ ಆಗದಂತೆ ಸಿದ್ದತೆ ಮಾಡಿಕೊಂಡಿದ್ದು ಅಲರ್ಟ್ ಆಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail