Vijayapatha – ವಿಜಯಪಥ
Friday, November 1, 2024
NEWSರಾಜಕೀಯ

ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆರ್ ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತ್ತು ರಾಜೇಶ್‌ಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಹಿಂದೆ ಕಾಂಗ್ರೆಸ್ ನಿಂದ ಎರಡು ಬಾರಿ ಗೆಲುವು ಸಾಧಿಸಿದ್ದ ಮುನಿರತ್ನ ಅವರು ಈ ಬಾರಿ ಬಿಜೆಪಿ ಸೇರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಇನ್ನು ಶಿರಾದಿಂದ ಇದೇ ಮೊದಲಬಾರಿಗೆ ನಿಂತು ರಾಜೇಶ್‌ಗೌಡ ಅವರು ಗೆಲುವು ಸಾಧಿಸಿದ್ದು, ಬಿಜೆಪಿ ಶಿರಾದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದೆ.

ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಅವರು ಅಂತಿಮವಾಗಿ 57,672 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಬಿಜಿಪಿಯ ಮುನಿರತ್ನ ಅವರು ಒಟ್ಟು 1,25,665 ಮತಗಳನ್ನು ಪಡೆದರೆ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು 67,993 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಇನ್ನು ಶಿರಾದಲ್ಲೂ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ರಾಜೇಶ್‌ಗೌಡ ಗೆಲುವನ್ನು ಮುಡಿಗೇರಿಸಿಕೊಳ್ಳುತ್ತಿದ್ದಾರೆ. ಈಗ 20 ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು ಇನ್ನೂ 4 ಸುತ್ತಗಳು ಮಾತ್ರ ಬಾಕಿ ಇದೆ.

ಆರ್ ಆರ್ ನಗರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ಅಬ್ಬರದ ಪ್ರಚಾರ, ಆರೋಪ– ಪ್ರತ್ಯಾರೋಪ, ಜಾತಿ– ಕಣ್ಣೀರ ರಾಜಕಾರಣದ ಕಾರಣದಿಂದ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಭಾರಿ ಕುತೂಹಲ ಕೆರಳಿಸಿತ್ತು. ಅಲ್ಲದೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ನಡೆಯಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ, ಮತದಾರ ಬಿಜೆಪಿ ‘ಕೈ’ ಹಿಡಿದಿರುವುದು ಬಹುತೇಕ ಸ್ಪಷ್ಟವಾಗಿದೆ.

Leave a Reply

error: Content is protected !!
LATEST
ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ