CrimeNEWSದೇಶ-ವಿದೇಶ

ಹೋಟೆಲ್‌ನಲ್ಲಿ ಮಹಿಳೆಯ ಬರ್ಬರ ಹತ್ಯೆ: ಕೊಲೆ ಮಾಡಲು ಇಷ್ಟವಿಲ್ಲ ಆದ್ರೆ ನಂಗೆ ಬೇರೆ ಆಯ್ಕೆ ಇಲ್ಲ!

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೋಲ್ಕತ್ತಾ: ಖಾಸಗಿ ಹೋಟೆಲೊಂದರಲ್ಲಿ 20 ವರ್ಷದ ಮಹಿಳೆಯೊಬ್ಬರು ಕೊಲೆಯಾಗಿರುವ ಘಟನೆ ಕೋಲ್ಕತ್ತಾ ಪೂರ್ವ ಹೊರವಲಯದಲ್ಲಿ ನಡೆದಿದೆ.

ಕೊಲೆಯಾಗಿರುವ ಮಹಿಳೆ ಕೊಠಡಿಯಲ್ಲಿ ಪೊಲೀಸರಿಗೆ ಬೆಂಗಾಲಿ ಭಾಷೆಯಲ್ಲಿ ಬರೆದ ಪತ್ರ ಒಂದು ದೊರೆತಿದೆ.

ನಿನ್ನನ್ನು ಕೊಲೆ ಮಾಡಲು ನನಗೆ ಇಷ್ಟವಿರಲಿಲ್ಲ ಆದರೆ ನನಗೆ ಬೇರೆ ಆಯ್ಕೆ ಇಲ್ಲ ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಅಲ್ಲದೆ ಒಡೆದುಹೋದ ಮದ್ಯದ ಬಾಟಲಿ ಕೊಲೆಯಾಗಿರುವ ಮಹಿಳೆ ಕೊಠಡಿಯಲ್ಲಿ ಪೊಲೀಸರಿಗೆ ಸಿಕ್ಕಿದೆ.

ಮಹಿಳೆಯ ತಂಗಿದ್ದ ಕೊಠಡಿಗೆ ಹೋಟೆಲ್ ಸಿಬ್ಬಂದಿಯೊಬ್ಬರು ಬಂದ ವೇಳೆ ಆಕೆ ಕೊಲೆಯಾಗಿರುವ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಘಟನೆ ಕುರಿತಂತೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ತನಿಖೆ ನಡೆಸಿದಾಗ ವ್ಯಕ್ತಿಯೊಬ್ಬರ ಜೊತೆ ಮಹಿಳೆ ಹೋಟೆಲಿಗೆ ಒಂದು ಗಂಟೆ ಸುಮಾರಿಗೆ ಬಂದಿದ್ದರು. 2 ಗಂಟೆ ಹೊತ್ತಿಗೆ ಊಟವನ್ನು ಆರ್ಡರ್ ಮಾಡಿದ್ದಾರೆ ಹಾಗೂ ನಾಲ್ಕು ಗಂಟೆ ಹೊತ್ತಿಗೆ ಆಕೆ ಜೊತೆಗಿದ್ದ ವ್ಯಕ್ತಿ ಹೋಟೆಲ್ ನಿಂದ ಹೊರಟಿದ್ದಾನೆ. ಮಹಿಳೆ ಇದ್ದ ರೂಂ ನಿಂದ ವ್ಯಕ್ತಿ ಹೊರ ಬಂದದ್ದನ್ನು ಆಕೆಯ ಪತಿ ನೋಡಿದ್ದಾರೆ.

ಕೊಲೆಯಾದ ಮಹಿಳೆ ಮತ್ತು ಆಕೆಯ ಪತಿ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ನಿವಾಸಿಗಳು ಎಂದು ತಿಳಿದುಬಂದಿದೆ. ಆದರೆ ಕೊಲೆಗೆ ಕಾರಣ ಏನು ಎಂಬುವುದು ಮಾತ್ರ ನಿಗೂಢವಾಗದೆ. ಹೀಗಾಗಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ