ಮೈಸೂರು: ಚಾಮುಂಡಿ ಬೆಟ್ಟದಲ್ಲಿರುವ ತಾಯಿ ಚಾಮುಂಡೇಶ್ವರಿ ದೇಗುಲ ಮತ್ತು ನಂಜನಗೂಡಿನ ನಂಜುಂಡೇಶ್ವರ ದೇವಾಲಯ ಪ್ರವೇಶಕ್ಕಾಗಿ ಭಕ್ತರಿಗೆ ಇದ್ದ ನಿಯಮವನ್ನು ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.
ಪ್ರತಿ ಶನಿವಾರ ಚಾಮುಂಡೇಶ್ವರಿ ಮತ್ತು ನಂಜುಂಡೇಶ್ವರ ಈ ಎರಡೂ ದೇವಾಲಯಗಳಿಗೆ ಭಕ್ತರಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳಂದು ಪ್ರವೇಶ ನಿರ್ಬಂಧ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಚಾಮುಂಡೇಶ್ವರಿ ದರ್ಶನಕ್ಕೆ ಸೋಮವಾರದಿಂದ -ಗುರುವಾರದವರೆಗೆ ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆ, ಮಧ್ಯಾಹ್ನ 3.30ರಿಂದ ಸಂಜೆ 6 ಗಂಟೆ, ರಾತ್ರಿ 7.30ರಿಂದ 8 ಗಂಟೆಯವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಹಾಗೆಯೇ ಶುಕ್ರವಾರ ಹಾಗೂ ಶನಿವಾರಗಳಲ್ಲಿ ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆ ಮಧ್ಯಾಹ್ನ 3.30ರಿಂದ 6 ಗಂಟೆ ವರೆಗೆ ಮಾತ್ರ ಪ್ರವೇಶ. ಶುಕ್ರವಾರ ಶನಿವಾರ ರಾತ್ರಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.
ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ 6 ಗಂಟೆಯಿಂದ 1 ಗಂಟೆ ಸಂಜೆ 4 ಗಂಟೆಯಿಂದ ರಾತ್ರಿ 8.30ರ ವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.