NEWSನಮ್ಮರಾಜ್ಯರಾಜಕೀಯ

ರಾಜ್ಯ ಸರ್ಕಾರದ ಸೂಪರ್‌ ಸಿಎಂ ವಿಜಯೇಂದ್ರ

ಬಿಜೆಪಿ ಶಾಸಕರೇ ಆರೋಪಿಸಿದ್ದಾರೆ ಎಂದ ಕಾಂಗ್ರೆಸ್‌ ವಕ್ತಾರ ಎಂ. ಲಕ್ಷ್ಮಣ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಒಂದು ವರ್ಷದಲ್ಲಿ ಐದು ಸಾವಿರ ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಕಾಂಗ್ರೆಸ್‌ ವಕ್ತಾರ ಎಂ. ಲಕ್ಷ್ಮಣ್‌ ಗಭೀರವಾದ ಆರೋಪ ಮಾಡಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ವಿಜಯೇಂದ್ರ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸೂಪರ್‌ ಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರ ಪಕ್ಷದ ಶಾಸಕರೇ ಬರೆದಿರುವ ಪತ್ರದಲ್ಲಿ ಆರೋಪಿಸಿದ್ದಾರೆ ಎಂದು ಬಿಜೆಪಿ ಶಾಸಕರು ಬರೆದಿದ್ದಾರೆ ಎನ್ನಲಾದ ಪತ್ರವನ್ನು ಬಿಡುಗಡೆ ಮಾಡಿದರು.

ಬಿಜೆಪಿ ಶಾಸಕರೇ ಸಹಿ ಮಾಡಿ ವಿಜಯೇಂದ್ರ ವಿರುದ್ಧ ಪಕ್ಷ ವರಿಷ್ಠರಿಗೆ ಬರೆದಿರುವ ಪತ್ರದಲ್ಲಿ ಗಂಭೀರ ಆರೋಪ ಮಾಡಿದ್ದಾರೆ ಎಂಬುವುದು ಈ ಪತ್ರದಿಂದ ತಿಳಿಯಲಿದೆ ಎಂದು ಹೇಳಿದರು.

ಇಷ್ಟೇ ಅಲ್ಲದೇ ಈ ಕುರಿತು ಆಡಿಯೋ ಮತ್ತು ವಿಡಿಯೋ ಕ್ಲಿಪಿಂಗ್‌ಗಳನ್ನು ನಾವು ಕ್ರೂಢೀಕರಿಸಿದ್ದು, ಸೆಪ್ಟೆಂಬರ್‌ ಎರಡು ಅಥವಾ ಮೂರನೇ ವಾರದಲ್ಲಿ ನ್ಯೂಡೆಲ್ಲಿಯಲ್ಲಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದರು.

ವಿಜಯೇಂದ್ರ 32 ಜನರ ಕೂಟ ರಚಿಸಿಕೊಂಡು ಪರ್ಯಾಯ ಸರ್ಕಾರ ನಡೆಸುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದು, ಏಳು ಜನ ಶಾಸಕರು ಸಹಿ ಹಾಕಿರುವ ಪತ್ರ ಇದಾಗಿದೆ. ಹೀಗಾಗಿ ಈ ಪತ್ರದಲ್ಲಿ ಮಾಡಲಾಗಿರುವ ಆರೋಪ ಕುರಿತು ಪರಿಶೀಲಿಸಬೇಕಿದೆ. ಇದಕ್ಕಾಗಿ 10 ದಿನಗಳ ಗಡುವು ಸಹ ನೀಡಲಾಗಿದ್ದು, ಈ ಬಗ್ಗೆ ಸಿಬಿಐ ತನಿಖೆ ಅಥವಾ ವಿಶೇಷ ತನಿಖೆ ನಡೆಸಬೇಕಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಇದ್ದರು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ