NEWSನಮ್ಮಜಿಲ್ಲೆರಾಜಕೀಯ

ಮೈಸೂರು: ಮೇಯರ್‌ ಆಯ್ಕೆ ಹಿಂದೆ ಅಡಗಿದೆಯೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಪರ್ಯಾಯ ನಾಯಕತ್ವದ ಲೆಕ್ಕಾಚಾರ ?

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಜೆಡಿಎಸ್ ನಲ್ಲಿ 6ಜನ ಆಕಾಂಕ್ಷಿಗಳಿದ್ದರೂ ರುಕ್ಮಿಣಿ ಅವರನ್ನು ಕುಮಾರಸ್ವಾಮಿ ಆಯ್ಕೆಮಾಡಿದ್ದರ ಹಿಂದೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಬಲವರ್ಧನೆಗೊಳಿಸುವ ತಂತ್ರಗಾರಿಕೆ ಇದೆ ಎಂದು ಹೇಳಲಾಗುತ್ತಿದೆ.

ರುಕ್ಮಿಣಿ ಪತಿ ಮಾದೇಗೌಡ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀರಾಂಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಜೆಡಿಎಸ್ ಸದಸ್ಯರು.

ಶಾಸಕ ಜಿ.ಟಿ. ದೇವೇಗೌಡ ಜಿಲ್ಲಾ ಪಂಚಾಯಿತಿ ಚುನಾವಣೆ ಸಂದರ್ಭ ಮಾದೇಗೌಡ ಅವರಿಗೆ ಟಿಕೆಟ್‌ ನೀಡಲು ನಿರಾಕರಿಸಿದ್ದು. ಆ ವೇಳೆ ಕುಮಾರಸ್ವಾಮಿ ಅವರ ಬಳಿಗೆ ತೆರಳಿ ಪಕ್ಷದ ಬಿ ಫಾರಂ ಪಡೆದು, ಶಾಸಕರಿಗೆ ಮಾತುಕತೆ ನಡೆಸುವಂತೆ ಸೂಚನೆ ನೀಡುವಂತೆಯೂ ಕೋರಿಕೊಂಡಿದ್ದರು. ಅದರಂತೆ ಶಾಸಕರ ಬಲದಿಂದ ವಿಜಯಶಾಲಿ ಯಾಗಿದ್ದಾರೆ.

ಆರಂಭದಿಂದಲೂ ಮಾದೇಗೌಡ ಅವರು ಜಿ.ಟಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದಾರೆ. ಈಗಲೂ ನಿಕಟ ಸಂಪರ್ಕದಲ್ಲಿದ್ದಾರೆ. ಬದಲಾದ ಕಾಲಘಟ್ಟದಲ್ಲಿ, ಜಿಟಿಡಿ ಏನಾದರೂ ಜೆಡಿಎಸ್ ತೊರೆದರೆ, ಪರ್ಯಾಯ ಅಭ್ಯರ್ಥಿ ತಯಾರಿಗೆ ಕುಮಾರಸ್ವಾಮಿ ಈಗಿನಿಂದಲೇ ವೇದಿಕೆ ಸಿದ್ಧಗೊಳಿಸುತ್ತಿದ್ದಾರೆ ಎಂಬುವುದು ಜೆಡಿಎಸ್ ಮೂಲಗಳಿಂದ ಖಚಿತಪಟ್ಟಿದೆ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಮತ್ತು ಕುರುಬ ಸಮುದಾಯದವರ ಪ್ರಾಬಲ್ಯ ಹೆಚ್ಚಾಗಿರುವುದರಿಂದ ಯಾವುದೇ ಪಕ್ಷದ ಅಭ್ಯರ್ಥಿ ಗೆಲುವಿಗೆ ಈ ಎರಡು ಸಮುದಾಯದವರು ನಿರ್ಣಾಯಕ ರಾಗಿರುತ್ತಾರೆ. ಆದ್ದರಿಂದ ಕುಮಾರಸ್ವಾಮಿಯವರು ಈಗಿನಿಂದಲೇ ಇಲ್ಲಿ ನಾಯಕನೊಬ್ಬನನ್ನು ಮುನ್ನೆಲೆಗೆ ತರುವತ್ತ ದೃಷ್ಟಿ ನೆಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್