ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ತಮ್ಮನ್ನು ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿ ಅವರನ್ನು ನಿಯೋಜಿಸಿದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸಿಎಟಿ ಅಕ್ಟೋಬರ್ 23ಕ್ಕೆ ಮುಂದೂಡಿದೆ.
ಅರ್ಜಿ ವಿಚಾರಣೆ ವೇಳೆ ಬಿ.ಶರತ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್. ಪೊನ್ನಣ್ಣ ಬಿ.ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ನಿಯಮಬಾಹಿರವಾಗಿ ಮತ್ತು ಅವಧಿಪೂರ್ವ ವರ್ಗಾವಣೆ ಮಾಡಲಾಗಿದೆ. ಸರಕಾರ ಎರಡು ವರ್ಷದ ಕಡ್ಡಾಯ ನಿಯಮವನ್ನು ಪಾಲನೆ ಮಾಡಿಲ್ಲ. ಜತೆಗೆ ಸಲಹಾ ಸಮಿತಿ ಅಭಿಪ್ರಾಯ ಪಡೆಯುವ ಪ್ರಕ್ರಿಯೆ ಪಾಲಿಸಿಲ್ಲ. ಹೀಗಾಗಿ ಸರ್ಕಾರದ ಕ್ರಮ ದುರುದ್ದೇಶಪೂರ್ವಕವಾಗಿದೆ ಎಂದು ಹೇಳಿದರು.
ಪೊನ್ನಣ್ಣ ವಾದ ಮಂಡನೆ ಬಳಿಕ ಪ್ರತಿ ವಾದ ಮಂಡಿಸಲು ಎಜಿ ಮತ್ತೆ ಕಾಲಾವಕಾಶ ಕೋರಿದರು ಈ ಹಿನ್ನೆಲೆಯಲ್ಲಿ ಸಿಎಟಿ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 23ಕ್ಕೆ ಮುಂದೂಡಿತು.