NEWSನಮ್ಮಜಿಲ್ಲೆರಾಜಕೀಯ

ಮೈಸೂರು: ನಾಳೆ ಗ್ರಾಪಂ ಚುನಾವಣೆ ಮತ ಎಣಿಕೆ ಹಿನ್ನೆಲೆ ಡಿ.31 ರವರೆಗೆ ನಿಷೇಧಾಜ್ಞೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯ ಮೈಸೂರು, ನಂಜನಗೂಡು, ತಿ.ನರಸೀಪುರ, ಹುಣಸೂರು, ಕೆ.ಆರ್‌.ನಗರ, ಪಿರಿಯಾಪಟ್ಟಣ, ಎಚ್‌.ಡಿ.ಕೋಟೆ ಮತ್ತು ಸರಗೂರು ತಾಲೂಕುಗಳ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಡಿಸೆಂಬರ್ 30ರಂದು ನಡೆಯಲಿದೆ.

ಈ  ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಡಿ.30ರ ಬೆಳಗ್ಗೆ 6 ಗಂಟೆಯಿಂದ 31ರ ರಾತ್ರಿ 11 ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಶಾಂತಿ, ನೆಮ್ಮದಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ಸಂತೆ ಹಾಗೂ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!