NEWSನಮ್ಮಜಿಲ್ಲೆ

ಮೈಸೂರು: ಬೀಡನಹಳ್ಳಿ ಗ್ರಾಮದ ಇಬ್ಬರಿಗೆ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಡನಹಳ್ಳಿ ಗ್ರಾಮದ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತರ ಮನೆಗೆ ಗ್ರಾಪಂ ಅಧಿಕಾರಿಗಳು ಭೇಟಿ ನೀಡಿ  ಮನೆಗಳನ್ನು ಸೀಲ್‌ಡೌನ್‌ ಮಾಡಿದ್ದಾರೆ.

ಕಳೆದ ನಾಲ್ಕು ದಿನದ ಹಿಂದೆ ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿತ್ತು. ನಂತರ ಶುಕ್ರವಾರ (ಜುಲೈ 7) ಮಹಿಳೆಯೊಬ್ಬರಿಗೆ ಸೋಂಕು ಇರುವುದು ಖಚಿತವಾದ ಹಿನ್ನೆಲೆಯಲ್ಲಿ ಆ ಸೋಂಕಿತರನ್ನು ಮೈಸೂರಿನ ನಿಗದಿತ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಮನೆಯವರಿಗೆ ಸೋಂಕಿನ ಬಗ್ಗೆ ತಿಳಿವಳಿಕೆ ನೀಡಿ ಮನೆಯಿಂದ ಹೊರ ಬಾರದಂತೆ ತಿಳಿಸಿದ್ದಾರೆ.

ಇನ್ನು ಅವರ ಮನೆಯವರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದ್ದು, ಅವರ ಗಂಟಲು ದ್ರವವನ್ನು ಕೋವಿಡ್‌ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ.

ಇದೇ ಗ್ರಾಮದ ವ್ಯಕ್ತಿಗೆ 15ದಿನದ ಹಿಂದೆ ಕೊರೊನಾ ಸೋಂಕು ತಗುಲಿದ್ದು ಅವರನ್ನು ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಕೊರೊನಾ ಸೋಂಕು ಗೆದ್ದುಬಂದಿದ್ದು ಆರೋಗ್ಯವಾಗಿದ್ದಾರೆ.

ಇನ್ನು ಮಾರಗೌಡನಹಳ್ಳಿಯ ವ್ಯಕ್ತಿಗೆ ಕೊರೊನಾ ಸೋಂಕು ದೃಡಪಟ್ಟಿದೆ, ಅದೇ ರೀತಿ ಬನ್ನೂರು ಟೌನ್‌ನಲ್ಲೂ ಸೋಂಕಿತರು ಪತ್ತೆಯಾಗಿದ್ದಾರೆ.  ಅವರನ್ನೂ ಸಹ ನಿಗದಿತ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ಗ್ರಾಮಗ್ರಾಮಕ್ಕೂ ಹಬ್ಬುತ್ತಿದ್ದು, ಜನರು ಅತ್ಯಂತ ಜಾಗರೂಕರಾಗಬೇಕಿದೆ. ನಾವು ಹಳ್ಳಿಯಲ್ಲಿ ಇದ್ದೇವೆ ನಮಗೆ ಕೊರೊನಾ ಸೋಂಕು ಬರುವುದಿಲ್ಲ ಎಂಬ ಭ್ರಮೆಯನ್ನು ಬಿಟ್ಟು ಆರೋಗ್ಯದ ಕಡೆಗೆ ಹೆಚ್ಚಿನ ಗಮನಕೊಡಬೇಕಿದೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ