ಮೈಸೂರು: ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನು ಮುಂದುವರಿಸಿದ್ದು 895 ಮಂದಿ ಈ ಸೋಂಕಿಗೆ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಸಾವಿನ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಿದ್ದು ಇಂದು 18 ಮಂದಿ ಮೃತಪಟ್ಟಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,775ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 399ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ 449 ಮಂದಿ ಗುಣಮುಖರಾಘಿ ಮನೆಗೆ ಮರಳಿದ್ದಾರೆ. ಇದರೊಂದಿಗೆ ಈವರೆಗೆ 11,105 ಮಂದಿ ಗುಣಮುಖರಾಗಿದ್ದಾರೆ. ಇನ್ನು 4,271 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.