ಮೈಸೂರು: ಪಂಚಲಿಂಗ ದರ್ಶನ ಮಹೋತ್ಸವದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದು, ಮುಂದಿನ ದಿನಗಳಲ್ಲಿ ಮುಜರಾಯಿ ಇಲಾಖೆ ಸಚಿವರ ಉಪಸ್ಥಿತಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಟಿ.ನರಸೀಪುರ ತಾಲೂಕಿನ ತಲಕಾಡು ಪಂಚಲಿಂಗ ದರ್ಶನ ಮಹೋತ್ಸವ-2020 ಸಂಬಂಧಪಟ್ಟಂತೆ ಗುರುವಾರ ನಡೆದ ಪೂರ್ವಭಾವಿ ಸಭೆಯ ನೈತೃತ್ವ ವಹಿಸಿ ಮಾತನಾಡಿದ ಅವರು, ಮುಜರಾಯಿ ಸಚಿವರ ನೇತೃತ್ವದಲ್ಲಿ ಸಭೆ ಕೈಗೊಂಡು ಇಲ್ಲಿನ ಮೂಲಭೂತ ಸೌಲಭ್ಯವನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಡಿಸೆಂಬರ್ 10ರಿಂದ 19 ರವರೆಗೆ ಪಂಚಲಿಂಗದರ್ಶನ ಮಹೋತ್ಸವ ಪ್ರಾರಂಭವಾಗಲಿದ್ದು, ಕಾರ್ಯಕ್ರಮವನ್ನು ಯಾವ ರೀತಿ ಆಚರಿಸಬೇಕು ಎಂಬ ನಿಟ್ಟಿನಲ್ಲಿ ಚರ್ಚೆಗಳು ನಡೆಸಲಾಗುವುದು ಎಂದರು.
ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮಾತನಾಡಿ, ರಸ್ತೆ ಸಂಪರ್ಕವನ್ನು ಲೋಕೋಪಯೋಗಿ ಇಲಾಖೆ, ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಇನ್ನಿತರ ಜವಾಬ್ದಾರಿಗಳನ್ನು ಬೇರೆ ಬೇರೆ ವಿಭಾಗಗಳಿಗೆ ವಿಂಗಡಿಸಲಾಗಿದೆ. ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಎಕ್ಸಿಕ್ಯುಟಿವ್ ಅಧಿಕಾರಿ ಹುದ್ದೆ ಖಾಲಿಯಾಗಿದ್ದು, ಸದ್ಯದ ಮಟ್ಟಿಗೆ ಆ ಹುದ್ದೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕಿದೆ ಎಂದು ಸಚಿವರಿಗೆ ವಿವರಣೆ ನೀಡಿದರು.
ಲೋಕೋಪಯೋಗಿ ಇಂಜಿನಿಯರ್ ಮಾತನಾಡಿ, ರಸ್ತೆ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಇನ್ನೊಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಸಭೆಯ ಗಮನಕ್ಕೆ ತಂದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಮಾತನಾಡಿ, ಮಹೋತ್ಸವ ಸಂದರ್ಭದಲ್ಲಿ ಸ್ನಾನಗೃಹ, ಬಟ್ಟೆ ಬದಲಿಸುವ ಗೃಹವನ್ನು ನಿರ್ಮಾಣ, ದೇವಸ್ಥಾನ ಜೀರ್ಣೋದ್ದಾರ ಕೆಲಸ ಸೇರಿದಂತೆ ಇನ್ನಿತರ ಕೆಲಸಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಆಸ್ಪತ್ರೆ ಸೌಕರ್ಯ, ವೈದ್ಯಕೀಯ ಉಪಕರಣ ಹಾಗೂ ಔಷಧಗಳ ದಾಸ್ತಾನು ಬಗ್ಗೆ ತಾಲೂಕು ವೈದ್ಯಾಧಿಕಾರಿ ಮಾಹಿತಿ ನೀಡಿದರೆ, ಪೊಲೀಸ್ ಇಲಾಖೆ ವತಿಯಿಂದ ಕೈಗೊಳ್ಳಲಾದ ಕ್ರಮಗಳು ಹಾಗೂ ಸಿಸಿಕ್ಯಾಮೆರಾ ಅಳವಡಿಕೆ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು. ರಸ್ತೆ ಸಾರಿಗೆ ಇಲಾಖೆ, ಚೆಸ್ಕಾಂ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಸಂಬಂಧಪಟ್ಟ ವಿಷಯಗಳ ಕುರಿತು ಮಾಹಿತಿ ನೀಡಿದರು.
ಶಾಸಕ ಅಶ್ವಿನ್‌ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿ.ಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಹಾಗೂ ಇತರರು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail