NEWSನಮ್ಮಜಿಲ್ಲೆ

ಬನ್ನೂರಿನಲ್ಲಿ ಎರಡು ಚಿರತೆಗಳು ಪ್ರತ್ಯಕ್ಷ: ಜನರಲ್ಲಿ ಆತಂಕ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು (ಮೈಸೂರು ಜಿಲ್ಲೆ):  ಬನ್ನೂರಿನಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕವನ್ನು ಉಂಟು ಮಾಡಿವೆ.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಚಿರತೆಗಳನ್ನು ನೋಡಿದ ರೈತರು ಗಾಬರಿಗೊಂಡಿದ್ದರು.  ನಂತರ  ಬನ್ನೂರಿನ ಪಟ್ಟಣಕ್ಕೂ ಅವು ಬಂದಿರುವುದು ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಚಿರತೆಗಳು ಪಟ್ಟಣ ಮತ್ತು ಪಟ್ಟಣದ ಹೊರವಲಯದಲ್ಲಿ ಕಾಣಿಸಿಕೊಂಡಿರುವ ವಿಷಯ ತಿಳಿದ ಬನ್ನೂರು ಪೊಲೀಸ್ ಠಾಣೆ ಪೊಲೀಸರು ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.

ಈ ನಡುವೆ ಅಕ್ಕಪಕ್ಕದ ಗ್ರಾಮಗಳಲ್ಲೂ ಚಿರತೆ ಬಂದಿರುವ ಬಗ್ಗೆ ಲೌಡ್ ಸ್ಪೀಕರ್ ಹಾಕಿಕೊಂಡು ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡುತ್ತಿದ್ದಾರೆ.

ಚಿರತೆಗಳು ಬನ್ನೂರಿನ ಒಳಗಡೆ ಬಂದಿರುವುದನ್ನು ಸಿಸಿ ಕ್ಯಾಮೆರಾದ ಮೂಲಕ ನೋಡಿ ಗಾಬರಿಗೊಂಡಿರುವ ಜನತೆ ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಕಾರ್ಯಪ್ರವೃತ್ತರಾಗಿದ್ದು ಚಿರತೆಗಳು ಎಲ್ಲೆಲ್ಲಿ ಓಡಾಡಿವೆ ಎಂಬುದನ್ನು ತಪಾಸಣೆ ಮಾಡುತ್ತಿದ್ದಾರೆ.

ಅಲ್ಲದೆ ಅವು ಬಂದದಾರಿಯಲ್ಲೇ ವಾಪಸ್‌ ಹೋಗಿವೆಯೇ ಅಥವಾ ಇಲ್ಲೇ ಎಲ್ಲಾದರೂ ಅಡಗಿ ಕುಳಿತಿವೆಯೇ ಎಂಬ ಬಗ್ಗೆ ಶೋಧಕಾರ್ಯದಲ್ಲಿ ತೊಡಗಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್