NEWSನಮ್ಮರಾಜ್ಯ

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂ. ಪ್ರೋತ್ಸಾಹ ಧನ

ಜಿಲ್ಲೆ ಜನತೆಗೂ ಅಭಿನಂದನೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೋವಿಡ್ 19 ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯನ್ನು ಸಹಕಾರ ಇಲಾಖೆ ವತಿಯಿಂದ ಕೊಡುತ್ತಿದ್ದೇವೆ. ಇದಕ್ಕಾಗಿ ಒಟ್ಟು 12 ಕೋಟಿ 37 ಲಕ್ಷ ರೂಪಾಯಿ ಖರ್ಚು ಆಗಲಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಶನಿವಾರ ಕರ್ನಾಟಕ ಕಲಾಮಂದಿರದಲ್ಲಿ ರಾಜ್ಯದ 40,500 ಆಶಾ ಕಾರ್ಯಕರ್ತರಿಗೆ ಅನುಕೂಲವಾಗುವ  ನಿಟ್ಟಿನಲ್ಲಿ ತಲಾ 3 ಸಾವಿರ ರೂಪಾಯಿ ಸಹಾಯಧನ ವಿತರಣೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ 180 ಜನರಿಗೆ ಮೈಸೂರಿನಲ್ಲಿ ವಿತರಣೆ ಮಾಡುವ ಮೂಲಕ ಯೋಜನೆಗೆ ಚಾಲನೆ  ನೀಡಿ ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಕೊರೊನಾ ವಿರುದ್ಧ ಹೋರಾಡಿದ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಸಹಾಯಧನ ವಿತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಕೇಳಿದಾಗ ಇಲಾಖೆ ವತಿಯಿಂದಲೇ ಹಣವನ್ನು ಭರಿಸುವುದಾಗಿ ತಿಳಿಸಿದೆ. ನಂತರ ಶುಕ್ರವಾರ ಮುಖ್ಯಮಂತ್ರಿಗಳು ಸಹಾಯಧನದ ಬಗ್ಗೆ ಘೋಷಿಸಿದರು ಎಂದರು.

ಕೊರೊನಾ ಹರಡುವುದನ್ನು ನಿಯಂತ್ರಿಸಲು ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್ ಅವರು ಎಸಿ ಕೊಠಡಿಯಲ್ಲಿ ಕೂರದೇ ಅವಿರತವಾಗಿ ಶ್ರಮ ಹಾಕಿದ್ದಾರೆ. ಇವರ ಜೊತೆ ಅಧಿಕಾರಿಗಳು, ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವರ ಶ್ರಮವಿದೆ. ಮೈಸೂರು ಕೊರೋನಾ ಮುಕ್ತವಾಗಬೇಕಾದರೆ ಇವರೆಲ್ಲರ ಶ್ರಮ ಇದೆ ಎಂದು ನಾನು ಸಭೆಯ ವೇಳೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದೇನೆ. ಹಾಗಾಗಿ ಅವರೂ ಸಹ ಕರೋನಾ ಮುಕ್ತ ರಾಜ್ಯಕ್ಕಾಗಿ ಹೋರಾಡಿದವರಿಗೆ ಅಭಿನಂದನೆ ಸಲ್ಲಿಸಬೇಕು ಎಂದು ಅಭಿಪ್ರಾಯಪಟ್ಟರು ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇನ್ನೂ ಇದೇ ವೇಳೆ ಮೈಸೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಮೈಸೂರು ಜಿಲ್ಲೆ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಒಟ್ಟು 35 ಲಕ್ಷ ರೂಪಾಯಿ ಸಹಾಯಧನವನ್ನು ಸಚಿವರು ವಿತರಿಸಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಸುಮಾರು 40 ಸಾವಿರ ಆಶಾ ಕಾರ್ಯಕರ್ತೆಯರಿಗೆ ಸಹಾಯಧನವನ್ನು ಸಹಕಾರ ಇಲಾಖೆಯಿಂದಲೇ ಕೊಡುತ್ತೇವೆ. ಇದಕ್ಕಾಗಿ ಖರ್ಚಾಗುವ 12.37 ಕೋಟಿ ರೂಪಾಯಿಯನ್ನು ಇಲಾಖೆಯಿಂದಲೇ ಭರಿಸುವುದಾಗಿ ಹೇಳಿ ಅದನ್ನು ಜಾರಿಗೆ ತಂದಿದ್ದಾರೆ. ಅಲ್ಲದೆ, ಮೃಗಾಲಯದ ಪ್ರಾಣಿಗಳ ನಿರ್ವಹಣೆಗಾಗಿ 2.51 ಕೋಟಿಯನ್ನು ಸಂಗ್ರಹಿಸಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದಕ್ಕೋಸ್ಕರ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಬಳಿಕ ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್ ಮಾತನಾಡಿ, ಇನ್ನೂ ಹಲವು ತಿಂಗಳ ಕಾಲ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಮಾಸ್ಕ್, ಸ್ಯಾನಿಟೈಸರ್ ಬಳಸುವುದು ಇತ್ಯಾದಿ ಕ್ರಮಗಳನ್ನು ಅನುಸರಿಸಬೇಕು ಎಂದು ಮೈಸೂರಿನ ಜನತೆಗೆ ಮನವಿ ಮಾಡಿದರು. ರಾಜ್ಯ ಸರ್ಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ಯಾವುದೇ ಕೆಲಸಕ್ಕೂ ಹಸ್ತಕ್ಷೇಪ ಮಾಡಿಲ್ಲ. ಇದಕ್ಕಾಗಿ ಧನ್ಯವಾದ ತಿಳಿಸುತ್ತೇನೆ ಎಂದರು.

ಮೈಸೂರು ಕೊರೊನಾ ಮುಕ್ತವಾಗಲು ಶ್ರಮಿಸಿದ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಪೊಲೀಸ್ ಆಯುಕ್ತ  ಡಾ.ಚಂದ್ರಗುಪ್ತ, ಎಸ್‌ಪಿ ರಿಷ್ಯಂತ್, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ಮುಡಾ ಆಯುಕ್ತರು, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ರವರಿಗೆ ಭಾರತದ ಸಂವಿಧಾನದ ಪುಸ್ತಕ ವಿತರಿಸಿ, ಮೈಸೂರು ಪೇಟ ಹಾಗೂ ಶಾಲು ಹೊದಿಸುವ ಮೂಲಕ ಸಚಿವ ಸೋಮಶೇಖರ್ ಹಾಗೂ ಸಂಸದರು ಮತ್ತು ಶಾಸಕರು ಸೇರಿ ಗೌರವಿಸಿದರು. ಮುಂದಿನ ದಿನಗಳಲ್ಲಿ ಇದಕ್ಕಾಗಿ ಶ್ರಮಿಸಿದವರಿಗೆ ಗೌರವಿಸುವುದಾಗಿ ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಚವನ್ ಪ್ರಾಶ್ ವಿತರಣೆ
ಮೈಸೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ  ಜಿ.ಡಿ.ಹರೀಶ್ ಗೌಡ ಅವರ ವತಿಯಿಂದ ಆಶಾಕಾರ್ಯಕರ್ತೆಯರಿಗೆ ಆಹಾರ ಕಿಟ್ ಹಾಗೂ ಆಯುಷ್ ಇಲಾಖೆ ವತಿಯಿಂದ ರೋಗನಿರೋಧಕ ಶಕ್ತಿ ಹೆಚ್ಚಿಸುವ ಚವನ್ ಪ್ರಾಶ್ ಲೇಹವನ್ನು ಆಶಾ ಕಾರ್ಯಕರ್ತೆಯರಿಗೆ  ಸೋಮಶೇಖರ್ ವಿತರಿಸಿದರು.

ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ನಾಗೇಂದ್ರ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಿಷ್ಯಂತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೇಂಕಟೇಶ್ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು