NEWSಕೃಷಿನಮ್ಮಜಿಲ್ಲೆ

ದೊಡ್ಡಹುಂಡಿಗೆ ಸಚಿವ ಈಶ್ವರಪ್ಪ ಭೇಟಿ

ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ l ನರೇಗಾ ಕೂಲ ಕಾರ್ಮಿಕರ ಕ್ಷೇಮ ವಿಚಾರಣೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು:  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ  ಕೆ.ಎಸ್.ಈಶ್ವರಪ್ಪ ಹಾಗೂ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್   ಗುರುವಾರ  ಟಿ.ನರಸೀಪುರ ತಾಲೂಕಿನ ದೊಡ್ಡಹುಂಡಿ ಮತ್ತು ಟಿ.ದೊಡ್ಡಪುರ ಗ್ರಾಮದಲ್ಲಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೇಟಿ ನೀಡಿ  ಪರಿಶೀಲನೆ ನಡೆಸಿದರು.

ಮನ್ರೇಗಾ ಯೋಜನೆಯಡಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿದ ಸಚಿವದ್ವಯರು ಕೂಲಿ ಕಾರ್ಮಿಕರಿಂದ ಕಾಮಗಾರಿ ಕುರಿತು ಮಾಹಿತಿ ಪಡೆದುಕೊಂಡರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಬಳಿಕ ಮಾತನಾಡಿದ ಈಶ್ವರಪ್ಪ, ಪ್ರಧಾನಿ ಮಂತ್ರಿಗಳು ನೀಡಿರುವ 20 ಲಕ್ಷ ಕೋಟಿ ರೂ. ಅನುದಾನದಲ್ಲಿ 40 ಸಾವಿರ ಕೋಟಿ ಮನ್ರೇಗಾ ಯೋಜನೆಗೆ ನೀಡಿದ್ದಾರೆ. ಈ ಯೋಜನೆಯಿಂದ ರೈತರು ಮತ್ತು ಕೂಲಿ ಕಾರ್ಮಿಕರಿಗೆ ತುಂಬಾ ಅನುಕೂಲವಾಗುತ್ತದೆ ಎಂದರು.

ಕೆರೆ ಅಭಿವೃದ್ಧಿ ಪಡಿಸುವುದರ ಜೊತೆಗೆ ಅಂತರ್ಜಲದ ಮಟ್ಟವನ್ನು ಹೆಚ್ಚಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ರಾಜ್ಯದಲ್ಲಿ ಒಂದೇ ದಿನ 90 ಸಾವಿರಕ್ಕೂ ಹೆಚ್ಚು ಜನ ಕೂಲಿಯನ್ನು ಅರಸಿ ಬಂದಿದ್ದಾರೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಮನ್ರೇಗಾ ಯೋಜನೆಯಡಿ ಕೆರೆ ಅಭಿವೃದ್ಧಿ ಕಾಮಗಾರಿ ಕೆಲಸವನ್ನು 100 ದಿನಗಳಿಂದ 150 ದಿನಗಳ ವರೆಗೆ ಏರಿಕೆ ಮಾಡಲಾಗಿದೆ. ಟಿ.ನರಸೀಪುರ ತಾಲ್ಲೂಕಿನ ದೊಡ್ಡಹುಂಡಿ ಮತ್ತು ಟಿ.ದೊಡ್ಡಪುರ ಗ್ರಾಮದಲ್ಲಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿಗೆ ಹೆಚ್ಚಿನ ಕೂಲಿ ಕಾರ್ಮಿಕರನ್ನು ನೇಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಸದ  ಪ್ರತಾಪಸಿಂಹ, ಟಿ.ನರಸಿಪುರ ಶಾಸಕ ಅಶ್ವಿನ್ ಕುಮಾರ್, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ನರೇಗಾ ಆಯುಕ್ತ ಅನಿರುದ್ಧ್ ಶ್ರವಣ, ಜಿಪಂ ಸಿಇಒ  ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

Leave a Reply