NEWSನಮ್ಮರಾಜ್ಯ

ನಷ್ಟಕ್ಕೊಳಗಾದ ರೈತರ ಗುರುತಿಸಿ ಪರಿಹಾರ ಕೊಡಿ

ತೋಟಗಾರಿಕೆ ಅಧಿಕಾರಿಗಳಿಗೆ ಸಚಿವ ಡಾ.ನಾರಾಯಣ ಗೌಡ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು:  ರೈತರಿಗೆ ಅನುಕೂಲವಾಗುವ ರೀತಿ  ಸರ್ಕಾರ ಈಗಾಗಲೇ ರೂಪಿಸಿರುವ ರೈತಪರ ಯೋಜನೆಗಳನ್ನು ರೈತರಿಗೆ ತಲುಪಿಸಲು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಡಾ.ನಾರಾಯಣ ಗೌಡ ಹೇಳಿದರು.

ಸೋಮವಾರ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿಆಯೋಜಿಸಿದ್ದ  ಮೈಸೂರು ಜಿಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಲಾಕ್‌ಡೌನ್‌ನಿಂದ ನಷ್ಟವಾಗಿರುವ ರೈತರಿಗೆ ಪರಿಹಾರ ಕೊಡಬೇಕೆಂದು ಎಂದು ತೋಟಗಾರಿಕ ಇಲಾಖೆಯ ಉಪ ನಿರ್ದೇಶಕ ರುದ್ರೇಶ್ ಅವರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾತನಾಡಿ, ನಗರದಲ್ಲಿ ಅತ್ಯಾಕರ್ಷಕವಾಗಿ ಕೂಡಿರುವ ಕುಪ್ಪಣ್ಣ ಉದ್ಯಾನವನ್ನು ದಸರಾ ಸಮಯದಲ್ಲಿ ಮಾತ್ರ ತೆರೆಯಲಾಗುತ್ತದೆ. ಅದನ್ನು ವರ್ಷವಿಡೀ ತೆರೆದು 10 ರೂ. ಪ್ರವೇಶ ಶುಲ್ಕ ವಿಧಿಸಿದರೆ ಉದ್ಯಾನದ ನಿರ್ವಹಣೆಗೆ ಸಹಾಯವಾಗುತ್ತದೆ ಎಂದು ಸಲಹೆ ನೀಡಿದರು.

ಪ್ರತಿಕ್ರಿಯಿಸಿದ ಸಚಿವರು, ಉದ್ಯಾನವನ್ನು ವರ್ಷವಡೀ ತೆರೆಯುವಂತೆ ಉನ್ನತ ಮಟ್ಟದ ಸಭೆ ನಡೆಸಿ, ಆದಾಯ ಬರುವಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಹುಣಸೂರು ಭಾಗದಲ್ಲಿ ತಂಬಾಕು ಬೆಳೆಗೆ ಸಿಂಪಡಿಸುವ ಔಷದಿಯಿಂದ ರೇಷ್ಮೆ ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂಬ ಮಾಹಿತಿ ಬಂದಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ವಿಜ್ಞಾನಿಗಳನ್ನು ಕಳುಹಿಸಿ ಪರಿಶೀಲನೆ ಮಾಡಿಸಲಾಗುವುದು ಎಂದು ಹೇಳಿದರು.

ಶಾಸಕರಾದ ಬಿ.ಹರ್ಷವರ್ಧನ, ಎಲ್.ನಾಗೇಂದ್ರ, ಎಚ್.ಪಿ.ಮಂಜುನಾಥ್, ಅನಿಲ್ ಚಿಕ್ಕಮಾದು, ಸಂಸದ ಪ್ರತಾಪ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜ್, ಧರ್ಮಸೇನ, ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಲೋಕನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply