ಮೈಸೂರು: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಗುರುವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆರ್ಶೀವಾದ ಪಡೆದರು.
ಈ ವೇಳೆ ಮಾತನಾಡಿದ ಅವರು, ಉತ್ತರ ಭಾರತದಲ್ಲಿ ರಕ್ಕಸ ಮಿಡತೆಗಳು ಬೆಳೆ ನಾಶ ಪಡಿಸುತ್ತಿದ್ದು, ರಾಜ್ಯದಲ್ಲಿ ಕೃಷಿ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆ ಒಟ್ಟಿಗೆ ಸಭೆ ನಡೆಸಿ ಮಿಡತೆಗಳ ನಿಯಂತ್ರಣಕ್ಕೆ ಕಾರ್ಯತಂತ್ರ ರೂಪಿಸಲಾಗುವುದು ಎಂದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೇಂದ್ರ ಸರ್ಕಾರ ಸಂಕಷ್ಟದ ಕಾಲದಲ್ಲಿ ಅತ್ಯುತ್ತಮವಾದ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. 20 ಲಕ್ಷ ಕೋಟಿ ರೂಪಾಯ ಪ್ಯಾಕೇಜ್ ಇನ್ನೂ ಇಲಾಖಾವಾರು ಹಂಚಿಕೆಯಾಗಿಲ್ಲ. ಅದರಲ್ಲಿ ಜಲ ಸಂಪನ್ಮೂಲ ಇಲಾಖೆಗೆ ಎಷ್ಟು ಸಿಗುತ್ತದೆ ಎಂಬುದು ಶೀಘ್ರದಲ್ಲೇ ತಿಳಿಯಲಿದೆ ಎಂದು ಮಾಹಿತಿ ನೀಡಿದರು.
ಕೃಷಿಗೆ ನೀರು ಹರಿಸುವ ವಿಚಾರ ಸಂಬಂಧ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು, ರಾಜ್ಯದ ಜಲಾಶಯಗಳ ಸ್ಥಿತಿಗತಿ ಗಮನಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕಾವೇರಿ ಹಾಗೂ ಕಬಿನಿ ಜಲಾಶಯಗಳು ಅಂತರರಾಜ್ಯ ಸಂಬಂಧ ಹೊಂದಿವೆ. ಈ ಜಲಾಶಯಗಳಿಂದ ನೀರು ಹರಿಸಲು ಕೇಂದ್ರೀಯ ಜಲ ಮಂಡಳಿಯಲ್ಲಿ ಅಧಿಕಾರಿಗಳ ಸಭೆ ನಡೆದಿದೆ. ಸಭೆಯಲ್ಲಿ ನೀರು ಹರಿಸುವ ಸಂಬಂಧ ಚರ್ಚೆಯಾಗಿದೆ ಎಂದು ತಿಳಿಸಿದರು.
ಅಂತರ್‍ಜಲ ಮಟ್ಟ ಹೆಚ್ಚಿಸಲು ರೈತರು ತುಂತುರು ನೀರಾವರಿ ಮೂಲಕ ವ್ಯವಸಾಯ ಮಾಡುವುದು ಒಳ್ಳೆಯದು. ಅಂತರ್ಜಲ ಮಟ್ಟ ಹೆಚ್ಚಿಸಲು ಇಲಾಖೆ ವತಿಯಿಂದ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮಾಹಿತಿ ನೀಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail