ಮೈಸೂರು: ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ. ಅವರಿಗೆ ಗೌರವ ಸಲ್ಲಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ವರ್ಷ ಅವರ ಹೆಸರಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ನಾಡಿನ 10 ಗಣ್ಯರಿಗೆ ಜಿಲ್ಲಾಡಳಿತ ವತಿಯಿಂದ ಗೌರವಿಸಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದ ಕೆ.ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಕೊರೋನಾ ಸೋಂಕು ಇರುವ ಕಾರಣ ಗಣ್ಯರ ಗುರುತಿಸುವ ಕಾರ್ಯವಾಗಲಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಸಾಧಕರನ್ನು ಆಯ್ಕೆ ಮಾಡಿ, ಗೌರವಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಲಿದೆ. ಈ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಗೌರವ ಸೂಚಿಸಲಾಗುವುದು ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಮೃಗಾಲಯ ತೆರೆಯಲು ಇನ್ನೆರಡು ದಿನದಲ್ಲಿ ಆದೇಶ
ಮೈಸೂರು ಜಯಚಾಮರಾಜೇಂದ್ರ ಮೃಗಾಲಯ ತೆರೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಅಲ್ಲಿಂದಲೂ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿದ್ದು, ಇನ್ನೆರಡು ದಿನದಲ್ಲಿ ಆದೇಶ ಹೊರಬೀಳಲಿದೆ ಎಂದು ತಿಳಿಸಿದರು.
ಕೋವಿಡ್ ಬಗ್ಗೆ ಭಯ ಬೇಡ
ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿ ಈಗಾಗಲೇ ನಿಯಂತ್ರಣಕ್ಕೆ ಬಂದಿದೆ. ಆದರೆ, ಮುಂಬೈ ಸೇರಿದಂತೆ ಹೊರ ರಾಜ್ಯದಿಂದ ಬಂದವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜೊತೆಗೆ ಇವರೆಲ್ಲರ ಪರೀಕ್ಷೆಗೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದ್ದು, ಯಾರೂ ಭಯಪಡುವುದು ಬೇಡ ಎಂದರು.
ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ನಾಗೇಂದ್ರ, ಮೇಯರ್ ತಸ್ನೀಂ, ಉಪಮೇಯರ್ ಸಿ.ಶ್ರೀಧರ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಡಿಸಿಪಿ ಡಾ.ಎ.ಎನ್.ಪ್ರಕಾಶ್‌ಗೌಡ ಉಪಸ್ಥಿರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail