NEWSನಮ್ಮಜಿಲ್ಲೆರಾಜಕೀಯ

 ಮೈಸೂರಿನಲ್ಲಿ ಸಂಜೆ 6ರಿಂದ ಅಂಗಡಿಗಳು ಬಂದ್‌

ಮಾಸ್ಕ್‌ ಧರಿಸದಿದ್ದರೆ 100-200 ರೂ. ದಂಡ l ಸಚಿವ ಸೋಮಶೇಖರ್‌ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ತರಲು ಸಾರ್ವಜನಿಕರ ಸಹಕಾರ ಹಾಗೂ ಜವಾಬ್ದಾರಿ ಸಹ ದೊಡ್ಡದು. ಈ ಹಿನ್ನೆಲೆಯಲ್ಲಿ ಇನ್ನು ಮಾಸ್ಕ್ ಹಾಕದೇ ಹೊರ ಬರುವುದು ಕಂಡರೆ ಪೊಲೀಸರು ದಂಡಹಾಕಲಿದ್ದಾರೆ ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದವರಿಗೆ 200 ರೂಪಾಯಿ ಹಾಗೂ ಗ್ರಾಮಾಂತರದಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದ್ದಾರೆ.

ಬುಧವಾರ ಮೈಸೂರಿನ ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದರು.

ಐಎಲ್ಐ ಮತ್ತು ಸ್ಯಾರಿ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಂಗಡಿ-ಮುಂಗಟ್ಟುಗಳನ್ನು ಸಂಜೆ 6 ಗಂಟೆ ನಂತರ ಸದ್ಯದ ಮಟ್ಟಿಗೆ ಬಂದ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ. ಶುಕ್ರವಾರದಿಂದ ಮೈಸೂರು ಜಿಲ್ಲೆಯಲ್ಲಿ ಈ ಆದೇಶ ಅನುಷ್ಠಾನಕ್ಕೆ ಬರಲಿದೆ ಎಂದು ವಿವರಿಸಿದರು.

ಸಾಮಾಜಿಕ ಅಂತರವನ್ನೂ ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈಗ ಬಾಯಿ ಮಾತಿನಲ್ಲಿ ಹೇಳಲಾಗುತ್ತದೆ. ಆಗಲೂ ಜನತೆ ಎಚ್ಚೆತ್ತುಕೊಳ್ಳದೆ ಗುಂಪು ಗುಂಪಾಗಿ ಕಾಣಿಸಿಕೊಂಡರೆ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಎಚ್ಚರಿಸಿದರು.

ಎಪಿಎಂಸಿಯಲ್ಲಿ ವ್ಯವಹಾರ ಮಾಡುವವರಿಗೆ ಹಾಗೂ ತರಕಾರಿ ಮಾರಾಟ ಮಾಡುವವರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಿಸಲಾಗುತ್ತದೆ. ಕಾರಣ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಸೇರುವುದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.

ಪೊಲೀಸ್ ಇಲಾಖೆಯಲ್ಲಿ 55 ವರ್ಷ ಮೇಲ್ಪಟ್ಟವರ ಮೇಲೆ ಅದರಲ್ಲೂ ಅವರ ಆರೋಗ್ಯದ ಸ್ಥಿತಿ ನೋಡಿಕೊಂಡು ಹೆಚ್ಚಿನ ಆದ್ಯತೆ ನೀಡಿ. ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೊಳಪಡಿಸುವ ತೀರ್ಮಾನಕ್ಕೆ ಬರಲಾಯಿತು.

ಮೈಸೂರಿನಲ್ಲಿ ಜಿಲ್ಲಾಡಾಳಿತ ಹಾಗೂ ವೈದ್ಯರ ತಂಡ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಅವರಿಗೆ ಸಾರ್ವಜನಿಕರ ಸಹಕಾರ ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ನಾವು ವೈಯುಕ್ತಿಕವಾಗಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಪ್ರತಿ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತರಿಗೆ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲ ಕಡೆ ಅನುದಾನ ನೀಡಲಾಗುತ್ತಿದೆ. ಬಳಿಕ ಆಯಾ ಕ್ಷೇತ್ರದ ಶಾಸಕರು ವಿತರಣೆ ಮಾಡುತ್ತಾರೆ. ಗ್ರಾಮೀಣ ಭಾಗದಲ್ಲಿ ವಿತರಣೆ ಮಾಡುತ್ತಿಲ್ಲ ಎಂಬುದು ಸುಳ್ಳು. ಅದಕ್ಕೋಸ್ಕರ ಪ್ರತಿ ಜಿಲ್ಲೆಗೆ ನಾವೇ ಖುದ್ದು ಭೇಟಿ ನೀಡಿ ವಿತರಣೆ ಮಾಡುತ್ತಿದ್ದೇವೆ. ಇನ್ನು 15 ದಿನಗಳಲ್ಲಿ ಎಲ್ಲ 42,685 ಆಶಾ ಕಾರ್ಯಕರ್ತೆಯರಿಗೂ ರೂ 3,000 ಪ್ರೋತ್ಸಾಹಧನ ವಿತರಣೆಯಾಗಲಿದೆ ಎಂದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು