NEWSನಮ್ಮರಾಜ್ಯರಾಜಕೀಯ

ನೆರೆ ಪೀಡಿತರಿಗೆ ಸಮರೋಪಾದಿಯಲ್ಲಿ ಸ್ಪಂದಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಎಚ್‌ಡಿಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ  ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದು ಹೇಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ  ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಒತ್ತಾಯಿಸಿದ್ದಾರೆ.

ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ  ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೊನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ  ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...