NEWSಕೃಷಿದೇಶ-ವಿದೇಶ

ಕೃಷಿ ತಜ್ಞರು, ಪ್ರಗತಿಪರ ರೈತರ ಬೇಡಿಕೆಯಂತೆ ನೂತನ ಕೃಷಿ ಮಸೂದೆ ಜಾರಿ: ಪ್ರಧಾನಿ ಮೋದಿ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ನ್ಯೂಡೆಲ್ಲಿ: ಕೃಷಿ ತಜ್ಞರು, ಆರ್ಥಿಕ ತಜ್ಞರು ಮತ್ತು ಪ್ರಗತಿಪರ ರೈತರು ನೂತನ ಕೃಷಿ ಮಸೂದೆಗಳು ಜಾರಿಯಾಗಬೇಕು ಎಂದು ಬೇಡಿಕೆ ಸಲ್ಲಿಸಿದ್ದರಿಂದ ನಾವು ಈ ಮಸೂದೆಯನ್ನು ಜಾರಿಗೆ ತಂದಿದ್ದೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇಂದು ಮಧ್ಯ ಪ್ರದೇಶದ ರೈಸನ್‌ನಲ್ಲಿ ನಡೆದ ‘ಕಿಸಾನ್ ಕಲ್ಯಾಣ್’ ರೈತ ಸಮಾವೇಶವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾತನಾಡಿದರು. ನೂತನ ಕೃಷಿ ಮಸೂದೆಯನ್ನು ರಾತ್ರಿ-ಹಗಲಾಗುವುದರ ಒಳಗೆ ತರಾತುರಿಯಲ್ಲಿ ಜಾರಿಗೆ ತಂದಿಲ್ಲ, ಈ ಸುಧಾರಿತ ಮಸೂದೆ ಬಗ್ಗೆ ಕಳೆದ 20-30 ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಸ್ತ್ರೃತವಾಗಿ ಚರ್ಚೆ ನಡೆಸುತ್ತಾ ಬಂದಿವೆ. ಹೀಗಾಗಿ ನಾವು ಯೋಚಿಸಿ ರೈತರಿಗೆ ಉಪಯುಕ್ತವಾಗುವ ರೀತಿಯಲ್ಲಿ ಮಸೂದೆ ತಿದ್ದುಪಡಿ ಮಾಡಿದ್ದೇವೆ ಎಂದು ಹೇಳಿದರು.

ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗಳು, ವಿರೋಧ ಪಕ್ಷಗಳ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ರಾಜಕೀಯ ಪಕ್ಷದವರನ್ನು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ, ನಮ್ಮ ಮೇಲೆ ನಂಬಿಕೆ ಇಟ್ಟುಕೊಳ್ಳಿ, ನಿಮ್ಮ ಹಳೆ ಚುನಾವಣಾ ಪ್ರಣಾಳಿಕೆಗಳ ಭರವಸೆ, ಆಶ್ವಾಸನೆಗಳನ್ನು ಇಂದು ನಾವು ಈಡೇರಿಸುತ್ತಿದ್ದೇವೆ. ರೈತರ ಜೀವನ ಸುಧಾರಣೆಯಾಗಬೇಕು, ಅವರು ಉದ್ಧಾರವಾಗಬೇಕೆಂಬುದೊಂದೇ ನನ್ನ ಬಯಕೆ.  ರೈತರು ಉದ್ಧಾರವಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನಗಳ ಮೂಲಕ ಆಧುನಿಕತೆ ಬರಬೇಕು ಎಂಬುದು ನನ್ನ ಉದ್ದೇಶವೇ ಹೊರತು ಬೇರಾವ ಸ್ವ ಹಿತಾಸಕ್ತಿಯು ಇದರಲ್ಲಿ ಇಲ್ಲ ಎಂದರು.

ರೈತರ ಹೆಸರಿನಲ್ಲಿ ಈ ಪ್ರತಿಭಟನೆ ಆರಂಭಿಸಿದವರು ಅವರು ಸರ್ಕಾರ ನಡೆಸುತ್ತಿದ್ದಾಗ, ಅವರ ಆಡಳಿತಾವಧಿಯಲ್ಲಿ ಏನು ರೈತರಿಗೆ ಕೊಟ್ಟರು ಎಂಬುದನ್ನು ಈ ದೇಶದ ಜನ ಅರ್ಥ ಮಾಡಿಕೊಳ್ಳಬೇಕು, ಹಿಂದಿನ ಸರ್ಕಾರ ಮಾಡಿರುವ ಕೆಲಸಗಳನ್ನು ಇಂದು ದೇಶದ ಜನತೆ ಮುಂದೆ, ರೈತರ ಮುಂದೆ ತೋರಿಸಿಕೊಡುತ್ತಿದ್ದೇನೆ ಎಂದರು.

ಇನ್ನು ರೈತರನ್ನು ಹಾದಿತಪ್ಪಿಸುವ ಕೆಲಸ ಮಾಡುವುದನ್ನು ರಾಜಕೀಯ ಪಕ್ಷಗಳು ನಿಲ್ಲಿಸಬೇಕು. ನೂತನ ಕೃಷಿ ಮಸೂದೆ ಬಂದು ಆರೇಳು ತಿಂಗಳುಗಳಾಗಿವೆ. ಈಗ ಹಠಾತ್ತಾಗಿ ಪ್ರತಿಭಟನೆಗೆ ಏಕೆ ಇಳಿದಿದ್ದಾರೆ, ಅಂದರೆ ತಮ್ಮ ರಾಜಕೀಯ ಲಾಭಕ್ಕಾಗಿ ರೈತರ ಮೂಲಕ ಸುಳ್ಳುಗಳ ಸರಮಾಲೆಯನ್ನು ಹೆಣೆದು ಆಟವಾಡುತ್ತಿದ್ದಾರೆ ಎಂದು ವಿಪಕ್ಷದವರನ್ನು ಪ್ರಧಾನಿ ದೂರಿದರು.

ಇಂದು ಹಲವು ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡನ್ನು ನೀಡಲಾಗಿದೆ. ಆ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಹಿಂದೆ ಎಲ್ಲಾ ರೈತರಿಗೆ ಈ ಸೌಲಭ್ಯ ಸಿಗುತ್ತಿರಲಿಲ್ಲ. ನಾವು ನಿಯಮ ಸರಳಗೊಳಿಸಿ ದೇಶದ ಎಲ್ಲಾ ರೈತರಿಗೆ ಸಿಗುವಂತೆ ಮಾಡಿದ್ದೇವೆ ಎಂದರು.

ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದೆ
ನೂತನ ಕೃಷಿ ಮಸೂದೆಯಲ್ಲಿ ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ)ಯನ್ನು ತೆಗೆದುಹಾಕಬೇಕೆಂದರೆ ನಾವೇಕೆ ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೆ ತರಬೇಕಾಗಿತ್ತು? ಕನಿಷ್ಠ ಬೆಂಬಲ ಬೆಲೆ ಜಾರಿಯ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ. ಅದು ಮುಂದುವರಿಯಲೇಬೇಕು. ಅದಕ್ಕಾಗಿ ನಾವು ಪ್ರತಿವರ್ಷ ಬಿತ್ತನೆ ಸಮಯಕ್ಕಿಂತ ಮೊದಲು ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಾ ಬಂದಿದ್ದೇವೆ. ಇದರಿಂದ ತಮ್ಮ ಬೆಳೆಗಳಿಗೆ ಲೆಕ್ಕಾಚಾರ ಹಾಕಲು ರೈತರಿಗೆ ಸುಲಭವಾಗುತ್ತದೆ ಎಂದು ಪ್ರಧಾನಿ ಸಮರ್ಥಿಸಿಕೊಂಡರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ