ನ್ಯೂಡೆಲ್ಲಿ:ದೇಶದ ಶ್ರಮಿಕ ವರ್ಗಗಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಕೊರೊನಾ ತಡೆಗೆ ದೇಶಾದ್ಯಂತ 3.O ಲಾಕ್ ಡೌನ್ ಇನ್ನು ಇರುವಾಗಲೇ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಆತ್ಮ ನಿರ್ಭರ ಭಾರತ ಅಭಿಯಾನವನ್ನು ಘೋಷಣೆ ಮಾಡಿದ್ದು, ಈ ಮೂಲಕ ಸ್ವಾವಲಂಬಿ ಭಾರತ ಎಂಬುದನ್ನು ನಾವು ತೋರಿಸಬೇಕು ಎಂದು ಹೇಳಿದ್ದಾರೆ. ಜತೆಗೆ ಮಧ್ಯಮ, ಬಡವರು ಮತ್ತು ಕಾರ್ಮಿಕ ವರ್ಗಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ 2೦ ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೋವಿಡ್ ಸಂಕಟ ಶುರುವಾದ ಸಂದರ್ಭದಲ್ಲಿ ಭಾರತದಲ್ಲಿ ಪಿಪಿಇ ಕಿಟ್ ತಯಾರಾಗುತ್ತಿರಲಿಲ್ಲ, ಎನ್ 95 ಮಾಸ್ಕ್ ಗಳು ಕೆಲವು ಸಂಖ್ಯೆಯಲ್ಲಿ ಮಾತ್ರವೇ ಉತ್ಪಾದನೆಯಾಗುತ್ತಿತ್ತು. ಈಗ ಭಾರತದಲ್ಲಿ ದಿನಂಪ್ರತಿ 2 ಲಕ್ಷ ಪಿಪಿಇ ಕಿಟ್ ಹಾಗೂ ಎನ್ 95 ಮಾಸ್ಕ್ ಗಳನ್ನು ತಯಾರಿಸುತ್ತಿದೆ. ವಿಶ್ವವೇ ಒಂದು ಕುಟುಂಬ ಎಂಬುದು ನಮ್ಮ ಸಂಸ್ಕೃತಿಯಾಗಿದ್ದು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಇದು ಸಾಬೀತುಗೊಂಡಿದೆ ಎಂದು ಮೋದಿ ಹೇಳಿದ್ದಾರೆ.
ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್ ದೇಶದ ಜಿಡಿಪಿಯ ಶೇ.10 ರಷ್ಟು ಇರಲಿದೆ. ಇದು ರೈತರು, ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೊದ್ಯಮಿಗಳು, ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಉಪಯೋಗಕ್ಕೆ ಬರಬೇಕಿದೆ ಎಂದು ಹೇಳಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇದೇ ವೇಳೆ ಸ್ವಾವಂಬಿ ಭಾರತ ಆಗಬೇಕಾದರೆ ದೇಶದ ಜನತೆ ಖಾದಿ, ಹ್ಯಾಂಡ್ ಲೂಮ್ ರೀತಿಯ ಸ್ಥಳೀಯ ಉತ್ಪನ್ನಗಳನ್ನು ಖರೀದಿಸಿ ಅದನ್ನು ಹೆಚ್ಚು ಪ್ರಚಾರ ಮಾಡುವಂತೆ ದೇಶವಾಸಿಗಳಿಗೆ ಮೋದಿ ಕರೆ ನೀಡಿದರು.
ನಾವು ಕೊರೊನಾ ಜೊತೆಯೇ ಜೀವಿಸುವುದನ್ನು ಕಲಿಯಬೇಕು, ಕೊರೊನಾ ಸವಾಲನ್ನು ಹೊಸ ಮನ್ವಂತರದೆಡೆಗೆ ದೇಶವನ್ನು ಕರೆದೊಯ್ಯಲು ಬಳಸಿಕೊಳ್ಳಬೇಕು. ಮೇ18 ರ ನಂತರ ಲಾಕ್ ಡೌನ್ ಹೊಸ ಸ್ವರೂಪದಲ್ಲಿ ಹೊಸ ಮಾರ್ಗಸೂಚಿಗಳೊಂದಿಗೆ ಬರಲಿದೆ. ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಚರ್ಚಿಸಿ ಮಾರ್ಗಸೂಚಿಗಳನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಅನ್ನು ಯಾವ ರೀತಿ ಮತ್ತು ಯಾರಿಗೆ ಅನುಕೂಲ ಕಲ್ಪಸಿಕೊಡಲು ಬಳಸಬೇಕು ಎಂಬುದರ ಬಗ್ಗೆ ನಾಳೆ ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಿಳಿಸಿಕೊಡಲಿದ್ದಾರೆ ಎಂದು ಹೇಳಿದರು.
ದೇಶದ ಜನತೆ ಸ್ಥಳೀಯ ಉತ್ಪನ್ನ ಮತ್ತು ವಸ್ತುಗಳ ಖರೀದಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆ ಮೂಲಕ ಮಾರುಕಟ್ಟೆಯನ್ನು ನಮ್ಮಲ್ಲೇ ಮೃದ್ಧಿಕೊಳಳುವ ಮೂಲಕ ಜಾಗತಿಕ ಮಟ್ಟದಲ್ಲೇ ವ್ಯವಹರಿಸುತ್ತಿದ್ದೇವೆ ಎಂಬುದನ್ನು ಮನಗಾಣಬೇಕು ಎಂದು ಸಲಹೆ ನೀಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಸ್ವ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿ ದೇಶವನ್ನು ಸ್ವಾವಲಂಬನೆಯತ್ತ ಕೊಂಡೊಯ್ಯಲು ಎಲ್ಲರೂ ಮುಂದಾಗಬೇಕು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಿ ಆರ್ಥಿಕ ಸ್ವಾವಲಂಬಲೆಯನ್ನು ಸಾಧಿಸುವತ್ತ ಹೆಜ್ಜೆ ಹಾಕಲು ಇದು ಸಕಾಲವಾಗಿದೆ. ವಿಶ್ವವು ನಮ್ಮ ದೇಶದತ್ತ ನೋಡುತ್ತಿದೆ. ನಮ್ಮಲ್ಲಿ ಪ್ರತಿಭಾಂತರಿದ್ದಾರೆ. ಮಾನವ ಸಂಪತ್ತು ಹೇರಳವಾಗಿದೆ. ನಾವು ಭೂಮಿಯನ್ನು ಪೂಜಿಸುವುದನ್ನು ನಮ್ಮ ಪೂರ್ವಜರಾದಿಯಾಗಿ ಕಲಿತ್ತಿದ್ದೇವೆ. ಚಿನ್ನವನ್ನು ದಿನಸಿ ರೀತಿಯಲ್ಲಿ ಮಾರಾಟ ಮಾಡುತ್ತಿದ್ದ ದೇಶ ನಮ್ಮದು ಆದರೆ ಗುಲಾಮಗಿರಿಗೆ ಒಳಗಾಗಿತ್ತು ಎಂದು ಹಳೆಯದನ್ನು ನೆನಪಿಸಿಕೊಂಡರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail