ನ್ಯೂಡೆಲ್ಲಿ: ಸಚಿವ ಸಂಪುಟ ವಿಸ್ತರಣೆ ವಿಚಾರ ಅಥವಾ ಪುನರ್‌ರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ ಅವರ ವಿವೇಚನೆಗೆ ಬಿಟ್ಟಿದ್ದು ಇದನ್ನು ಪ್ರಶ್ನಿಸುವ ಅಧಿಕಾರ ಬೇರೆಯವರಿಗೆ ಇಲ್ಲ ಎಂದು ರಾಜ್ಯ ಬಿಜೆಪಿ ಸಚಿವರು ಹೇಳುತ್ತಿದ್ದಾರೆ. ಆದರೆ ಅತ್ತ ಸ್ವತಃ ಸಿಎಂ ಯಡಿಯೂರಪ್ಪ ಅವರೇ ಸಚಿವ ಸಂಪುಟ ವಿಸ್ತರಣೆ ಪಕ್ಷದ ರಾಷ್ಟ್ರೀಯ ನಾಯಕರಿಗೆ ಬಿಟ್ಟಿದ್ದು ಅವರ ಏನು ಸೂಚಿಸುತ್ತಾರೋ ಅದರಂತೆ ನಡೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ನ್ಯೂಡೆಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜತೆ ಚೆರ್ಚೆ ನಡೆಸಲಾಗಿದೆ. ಪ್ರಧಾನಮಂತ್ರಿ ಅವರೊಂದಿಗೆ ರಾಷ್ಟ್ರೀಯ ಅಧ್ಯಕ್ಷರು ಚೆರ್ಚಿಸಿ ಅಂತಿಮ ತೀರ್ಮಾನ ತಿಳಿಸಲಿದ್ದಾರೆ ಎಂದರು.
ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಪುನಾರಚನೆ ಮಾಡಬೇಕೋ ಎಂಬುದನ್ನು ರಾಷ್ಟ್ರೀಯ ನಾಯಕರೇ ನಿರ್ಧರಿಸುತ್ತಾರೆ. ಆದರೆ, ಅಧಿವೇಶನಕ್ಕೂ ಮುನ್ನ ವಿಸ್ತರಣೆ ಆಗಬೇಕು ಅನ್ನೋದು ನನ್ನ ಆಪೇಕ್ಷೆ. ವಿಸ್ತರಣೆಯೋ, ಪುನರ್ ರಚನೆಯೋ, ಎಷ್ಟು ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಅನ್ನೋದನ್ನು ಹೈಕಮಾಂಡ್ ತಿಳಿಸಲಿದೆ ಎಂದು ಹೇಳಿದ್ದಾರೆ.